ವಿವಿಧ ಆರೋಪಗಳಡಿ ರೌಡಿಶೀಟರ್ ಮುಹಮ್ಮದ್ ಸುಭಾನ್ 6 ತಿಂಗಳ ಕಾಲ ಗಡಿಪಾರು - Mahanayaka
11:04 AM Sunday 15 - December 2024

ವಿವಿಧ ಆರೋಪಗಳಡಿ ರೌಡಿಶೀಟರ್ ಮುಹಮ್ಮದ್ ಸುಭಾನ್ 6 ತಿಂಗಳ ಕಾಲ ಗಡಿಪಾರು

subhan
18/10/2022

ಉಡುಪಿ: ರೌಡಿಶೀಟರ್ ಹಾಗೂ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗಂಗೊಳ್ಳಿಯ ಜಾಮೀಯ ಮೊಹಲ್ಲಾ ಮೀನು ಮಾರುಕಟ್ಟೆ ಬಳಿಯ ನಿವಾಸಿ ಮುಹಮ್ಮದ್ ಸುಭಾನ್(25) ಎಂಬಾತನನ್ನು ಆರು ತಿಂಗಳ ಕಾಲ ಗಡಿಪಾರು ಮಾಡಿ ಕುಂದಾಪುರ ಉಪವಿಭಾಗ ದಂಡಾಧಿಕಾರಿ ಅ.17 ರಂದು ಆದೇಶ ಹೊರಡಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಮಚ್ಚೀಂದ್ರ ಹಾಕೆ ತಿಳಿಸಿದ್ದಾರೆ.

ಈತ ತನ್ನದೇ ತಂಡ ಕಟ್ಟಿಕೊಂಡು ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ, ದನ ಕಳ್ಳತನ ಹಾಗೂ ಜಾನುವಾರು ಸಾಗಾಟ ಮತ್ತು ಹಿಂಸೆ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದನು. ಕಳೆದ ಐದು ವರ್ಷಗಳಿಂದ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ರೀತಿಯಲ್ಲಿ ನಡೆದುಕೊಂಡು ಬರುತ್ತಿದ್ದಾನೆ. ಈತನ ವಿರುದ್ಧ ಹಲವು ಬಾರಿ ಕಾನೂನು ಕ್ರಮಗಳನ್ನು ಜರಗಿಸಲಾಗಿದೆ.

ಹಲವು ಪ್ರಕರಣಗಳಲ್ಲಿ ಬಂಧನಕ್ಕೆ ಒಳಪಟ್ಟು ನ್ಯಾಯಾಂಗ ಬಂಧನದಲ್ಲಿದ್ದರೂ ಕೂಡ ಈತ ನಡವಳಿಕೆಯಲ್ಲಿ ಯಾವುದೇ ಬದಲಾವಣೆ ತಂದುಕೊಳ್ಳದೆ ಅಪರಾಧ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಬರುತ್ತಿದ್ದಾರೆ. ಈತನ ವಿರುದ್ಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಒಟ್ಟು ಐದು ಪ್ರಕರಣಗಳು ದಾಖಲಾಗಿವೆ ಎಂದು ಅವರು ತಿಳಿಸಿದ್ದಾರೆ.

ಈತ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಹೊರ ಬಂದ ನಂತರವೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತಂದಿದ್ದಾನೆ. ಈ ಬಗ್ಗೆ ಮೇಲಾಧಿಕಾರಿಗಳ ಆದೇಶದಂತೆ ಗಂಗೊಳ್ಳಿ ಪೊಲೀಸ್ ಠಾಣಾ ಎಸ್ಸೈ ಕುಂದಾಪುರ ಉಪವಿಭಾಗ ದಂಡಾಧಿಕಾರಿಯವರಿಗೆ ವರದಿ ಸಲ್ಲಿಸಿದ್ದಾರೆ. ಉಪ ವಿಭಾಗ ದಂಡಾಧಿಕಾರಿ ಈ ವರದಿಯನ್ನು ಪರಿಶೀಲಿಸಿ ಸುಭಾನ್ ‌ನನ್ನು ಆರು ತಿಂಗಳ ಕಾಲ ಚಳ್ಳಕರೆ  ಉಪವಿಭಾಗಕ್ಕೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.

ಅಲ್ಲದೆ ಆರು ತಿಂಗಳ ಒಳಗೆ ಸಂಬಂಧಪಟ್ಟ ಪ್ರಾಧಿಕಾರದ ಅನುಮತಿಯನ್ನು ಪಡೆಯದೆ ಈತ ಕುಂದಾಪುರ ಪೊಲೀಸ್ ಉಪವಿಭಾಗದಲ್ಲಿ ಯಾವುದೇ ಕಾರಣಕ್ಕೂ ಕಂಡು ಬಂದರೆ ಬಂಧಿಸುವಂತೆ ಗಂಗೊಳ್ಳಿ ಎಸ್ಸೈಯವರಿಗೆ ಆದೇಶ ನೀಡಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ