ಉಡುಪಿಯಲ್ಲಿ ಸೌಹಾರ್ದತೆ ಬೆಸೆಯುವ ಸದ್ಭಾವನಾ ಯಾತ್ರೆ - Mahanayaka
11:17 PM Saturday 13 - September 2025

ಉಡುಪಿಯಲ್ಲಿ ಸೌಹಾರ್ದತೆ ಬೆಸೆಯುವ ಸದ್ಭಾವನಾ ಯಾತ್ರೆ

sadbhavana dina
03/10/2022

ಉಡುಪಿ ಜಿಲ್ಲಾ ಸಹಬಾಳ್ವೆ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸಬ್ ಕೋ ಸನ್ಮತಿ ದೇ ಭಗವಾನ್ ಘೋಷ್ಯ ವಾಕ್ಯದೊಂದಿಗೆ ಧರ್ಮಗಳ ಮಧ್ಯೆ ಸೌಹಾರ್ದತೆ ಬೆಸೆಯುವ ಸದ್ಭಾವನಾ ಯಾತ್ರೆಯನ್ನು ರವಿವಾರ ಉಡುಪಿ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು.


Provided by

ಬನ್ನಂಜೆ ನಾರಾಯಣ ಗುರು ಸಭಾಭವನ ವಠಾರದಲ್ಲಿ ರಾಷ್ಟ್ರಧ್ವಜವನ್ನು ಆನಂದ ಪೂಜಾರಿ ಉಡುಪಿ ಜಿಲ್ಲಾ ಸಹಬಾಳ್ವೆ ಅಧ್ಯಕ್ಷ ಅಮೃತ್ ಶೆಣೈ ಅವರಿಗೆ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು.

sadbhavana dina

ಅಲ್ಲಿಂದ ಹೊರಟ ನಡಿಗೆ ಸಿಟಿ ಬಸ್ ನಿಲ್ದಾಣದ ಮೂಲಕ ಉಡುಪಿ ಜಾಮೀಯ ಮಸೀದಿ ತಲುಪಿತು. ಬಳಿಕ ಕೆ.ಎಂ.ಮಾರ್ಗದಲ್ಲಿರುವ ಶೋಕಾಮಾತಾ ಇಗರ್ಜಿಗೆ ಆಗಮಿಸಿದ ನಡಿಗೆ, ಅಜ್ಜರಕಾಡು ಗಾಂಧಿ ಉದ್ಯಾನವನದಲ್ಲಿ ಸಮಾಪ್ತಿಗೊಂಡಿತು.

ಈ ಸಂದರ್ಭದಲ್ಲಿ ಸಹಬಾಳ್ವೆ ಜಿಲ್ಲಾ ಸಂಚಾಲಕ ಪ್ರಶಾಂತ್ ಜತ್ತನ್ನ, ಸಹಬಾಳ್ವೆ ಕರ್ನಾಟಕ ಸಂಚಾಲಕರಾದ ಪ್ರೊ.ಫಣಿರಾಜ್, ಯಾಸೀನ್ ಮಲ್ಪೆ, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಇಬ್ರಾಹಿಂ ಸಾಹೇಬ್ ಕೋಟ, ಕೆಥೋಲಿಕ್ ಸಭಾ ಅಧ್ಯಕ್ಷೆ ಮೇರಿ ಡಿಸೋಜ, ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್, ನಗರಸಭೆ ಸದಸ್ಯ ರಮೇಶ್ ಕಾಂಚನ್, ದಸಂಸ ಮುಖಂಡ ಶ್ಯಾಮ್‌ರಾಜ್ ಬಿರ್ತಿ ಮೊದಲಾದವರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ