ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಪ್ರಸಾದ್‌ ರಾಜ್ ಕಾಂಚನ್ ಅವರಿಂದ ನಾಮಪತ್ರ ಸಲ್ಲಿಕೆ

namapathra
17/04/2023

ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ  ಪ್ರಸಾದ್‌ರಾಜ್ ಕಾಂಚನ್ ಅವರು ಇಂದು ಸಹಸ್ರಾರು ಸಂಖ್ಯೆಯ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಿಂದ ಹೊರಟು ಪಾದಯಾತ್ರೆಯ ಮೂಲಕ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಪ್ರಸಾದ್‌ರಾಜ್ ಕಾಂಚನ್ ಅವರೊಂದಿಗೆ ಮಾಜಿ ಸಚಿವರು, ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು,  ಸರಳಾ ಕಾಂಚನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ದಿನಾಕರ್ ಹೇರೂರು ಹಾಗೂ ನಾಯಕರಾದ ಕುಶಲ್ ಶೆಟ್ಟಿ ಹಾಗೂ ಮೈರ್ಮಾಡಿ ಅಶೋಕ್ ಶೆಟ್ಟಿ ಅವರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version