ಯಶಸ್ವಿಯಾಗಿ ನೆರವೇರಿದ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ

ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನೆರವೇರಿದ್ದು, ರಾಮಮಂದಿರದ ಗರ್ಭ ಗುಡಿಯಲ್ಲಿ ನಡೆದ ಪ್ರಾಣ ಪ್ರತಿಷ್ಠಾಪನೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಪೂಜೆ ನೆರವೇರಿಸಿದರು.
ರಾಮಲಲ್ಲಾ ಮೂರ್ತಿಗೆ ನಮಸ್ಕರಿಸಿದ ಪ್ರಧಾನಿ ಮೋದಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪೇಜಾವರ ಶ್ರೀ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವಾರು ಮಂದಿ ಜೊತೆಗಿದ್ದರು.
ಪೂಜೆಯ ಬಳಿಕ ಪ್ರಧಾನಿ ಮೋದಿ ಗರ್ಭಗುಡಿಯಲ್ಲಿ ದೀರ್ಘ ದಂಡ ನಮಸ್ಕಾರ ಮಾಡಿದರು.
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಅಪೂರ್ಣ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಮುಕ್ತಾಯವಾಗಿದೆ. ಅಯೋಧ್ಯೆ ದೇವಾಲಯದ ಸಾಕಷ್ಟು ಕೆಲಸ ಕಾರ್ಯಗಳು ನಿರ್ಮಾಣ ಹಂತದಲ್ಲಿವೆ. ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸಾವಿರಾರು ಆಹ್ವಾನಿತ ಗಣ್ಯರು ಭಾಗವಹಿಸಿದ್ದರು.
ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಬಿಜೆಪಿ ರಾಜಕೀಯಗೊಳಿಸಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಿಂದ ಹೊರಗುಳಿದಿದೆ.