ರಾತ್ರೋ ರಾತ್ರಿ ಅಧಿಕಾರಿಗಳಿಂದ ಹಾಸ್ಟೆಲ್ ದಿಢೀರ್ ಪರಿಶೀಲನೆ: 89 ವಿದ್ಯಾರ್ಥಿನಿಯರ ಪತ್ತೆಯೇ ಇಲ್ಲ!

school hostel
23/08/2023

ರಾತ್ರಿ ವೇಳೆ ವಸತಿ ಶಾಲೆಯನ್ನು ಅಧಿಕಾರಿಗಳು ದಿಢೀರ್ ಪರಿಶೀಲನೆ ನಡೆಸಿದ ವೇಳೆ ಸುಮಾರು 89 ಬಾಲಕಿಯರು ವಸತಿ ಶಾಲೆಯಿಂದ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿರುವ ಘಟನೆ ಉತ್ತರ ಪ್ರದೇಶದ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಶಾಲೆಯ ವಾರ್ಡನ್ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. 100 ವಿದ್ಯಾರ್ಥಿನಿಯರು ಈ ವಸತಿ ಶಾಲೆಯಲ್ಲಿದ್ದರೂ ತಪಾಸಣೆಯ ವೇಳೆ ಇದ್ದದ್ದು ಕೇವಲ 11 ವಿದ್ಯಾರ್ಥಿನಿಯರು ಮಾತ್ರ ಉಳಿದ ವಿದ್ಯಾರ್ಥಿನಿಯರು ಆ ರಾತ್ರಿ ಸಮಯದಲ್ಲಿ ಎಲ್ಲಿ ಹೋಗಿದ್ದಾರೆ ಎನ್ನುವುದು ಇದೀಗ ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

ಪರಸ್ಪುರದ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ಶಾಲೆಯನ್ನು ಸೋಮವಾರ ರಾತ್ರಿ ದಿಢೀರ್ ಪರಿಶೀಲನೆ ನಡೆಸಲಾಗಿದೆ ಈ ವೇಳೆ ಇಂತಹದ್ದೊಂದು ಘಟನೆ ಬೆಳಕಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ನೇಹಾ ಶರ್ಮಾ ತಿಳಿಸಿದ್ದಾರೆ.

ವಸತಿ ಶಾಲೆಯಲ್ಲಿದ್ದ 89 ವಿದ್ಯಾರ್ಥಿನಿಯರು ಎಲ್ಲಿ ಎಂದು ವಾರ್ಡನ್ ಸರಿತಾ ಸಿಂಗ್ ಅವರನ್ನು ಅಧಿಕಾರಿಗಳು ಪ್ರಶ್ನಿಸಿದಾಗ ಅವರು ಸಮರ್ಪಕ ಉತ್ತರ ನೀಡಲು ವಿಫಲರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

Exit mobile version