ಏಕಾಏಕಿ ಎದುರಾದ ತಿರುವು: ಭೀಕರವಾಗಿ ಅಪಘಾತಕ್ಕೀಡಾದ ಕಾರು

ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಘಟನೆ ಮಂಗಳೂರು ನಗರದ ಸುರತ್ಕಲ್ ಸಮೀಪದ ತಡಂಬೈಲು ಮಾರಿಗುಡಿ ಬಳಿ ನಡೆದಿದೆ.
ಈ ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರಿನಲ್ಲಿ ಓರ್ವ ಯುವಕ ಮತ್ತು ಇಬ್ಬರು ಯುವತಿಯರು ಉಡುಪಿ ಕಡೆಯಿಂದ ಮಂಗಳೂರಿನತ್ತ ತೆರಳುತ್ತಿದ್ದರು.
ಇವರು ಸಂಚರಿಸುತ್ತಿದ್ದ ಕಾರು ಇಂದು ತಡಂಬೈಲು ಮಾರಿಗುಡಿ ಬಳಿ ಅಪಘಾತಕ್ಕೀಡಾಗಿದೆ. ರಾಷ್ಟ್ರೀಯ ಹೆದ್ದಾರಿ 66ರ ಮಾರಿಗುಡಿ ಬಳಿ ತಿರುವು ಇದ್ದು, ಈ ಬಗ್ಗೆ ಸ್ಥಳದಲ್ಲಿ ಯಾವುದೇ ಸೂಚನಾ ಫಲಕ ಇಲ್ಲದಿರುವುದರಿಂದ ತಿರುವು ತಕ್ಷಣಕ್ಕೆ ಚಾಲಕನ ಅರಿವಿಗೆ ಬಂದಿಲ್ಲ ಎನ್ನಲಾಗಿದೆ. ಇದರಿಂದ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದು ಹೆದ್ದಾರಿಯ ಇನ್ನೊಂದು ಪಾರ್ಶ್ವವನ್ನು ದಾಟಿ ರಸ್ತೆ ಬದಿಯ ಕಟ್ಟಡವೊಂದಕ್ಕೆ ಡಿಕ್ಕಿ ಹೊಡೆದಿದೆ.
ಈ ಘಟನೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಕ್ರಗಳು ಸ್ಫೋಟಗೊಂಡು ಛಿಧ್ರವಾಗಿವೆ. ಡಿಕ್ಕಿಯ ರಭಸಕ್ಕೆ ಕಟ್ಟಡಕ್ಕೂ ಹಾನಿಯಾಗಿದೆ. ಅಪಘಾತದ ವೇಳೆ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw