ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: 7 ಶಂಕಿತ ಆರೋಪಿಗಳು ಪೊಲೀಸ್ ವಶಕ್ಕೆ?

03/05/2025
ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು 7 ಮಂದಿ ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಬಜ್ಪೆಯ ಕಿನ್ನಿಪದವು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಗುರುವಾರ ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ತಂಡವೊಂದು ಸಾರ್ವಜನಿಕರ ಎದುರೇ ಬರ್ಬರವಾಗಿ ಹತ್ಯೆ ನಡೆಸಿತ್ತು. ಸದ್ಯ ಇದೀಗ ಶಂಕಿತ ಆರೋಪಿಗಳನ್ನ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಈ ಬಗ್ಗೆ ಅಧಿಕೃತ ವಿವರಗಳು ಇನ್ನೂ ಲಭ್ಯವಾಗಿಲ್ಲ, ಪೊಲೀಸ್ ಇಲಾಖೆ ಶೀಘ್ರವೇ ಈ ಬಗ್ಗೆ ಮಾಹಿತಿ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD