4:59 PM Saturday 6 - December 2025

ಸುಹಾಸ್ ಶೆಟ್ಟಿ ಹತ್ಯೆಗೆ ಯಾವ ಹಣದಲ್ಲಿ ಸುಪಾರಿ ನೀಡಿದ್ದು ತಿಳಿದಿಲ್ಲ: ಸಿಎಂ ಸಿದ್ದರಾಮಯ್ಯ

siddaramaiah
04/05/2025

ಬೆಂಗಳೂರು: ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ. ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸುವ ಸಂಬಂಧ ಗೃಹ ಸಚಿವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಕ್ಕಿಆಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಹಾಸ್ ಶೆಟ್ಟಿ ಹತ್ಯೆಗೆ ಸುಪಾರಿ ನೀಡಿದ್ದು ಯಾವ ಹಣದಲ್ಲಿ ಎನ್ನುವ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ತಿಳಿದಿಲ್ಲ. ನಿನ್ನೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಇಬ್ಬರೂ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಅವರೊಂದಿಗೆ ಮಾತನಾಡಿದ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ತಿಳಿಸಿದ್ದಾರೆ.

ಸರ್ಕಾರಕ್ಕೆ ಎರಡು ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯಲ್ಲಿ ಎರಡು ವರ್ಷಗಳ ಸಾಧನೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಇದೇ ವೇಳೆ ತಿಳಿಸಿದ್ದಾರೆ.

ಇನ್ನೂ ಜಾತಿ ಜನಗಣತಿ ಬಗ್ಗೆ ಪ್ರತಿಕ್ರಿಯೆ ನೀಡಿರು ಅವರು, ಜಾತಿಗಣತಿಯನ್ನು ಮಾಡಿಸುವ ಮೂಲಕ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದ್ದಾರೆ ಎಂದು ಟೀಕೆ ಮಾಡುತ್ತಿದ್ದವರು ಕೇಂದ್ರ ಸರ್ಕಾರ ಜಾತಿಗಣತಿ ಮಾಡಿಸುವುದನ್ನು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತಿದ್ದಾರೆ. ಶಂಖದಿಂದ ಬಂದರೆ ಮಾತ್ರ ತೀರ್ಥ ಎಂಬಂತಾಗಿದೆ. ಮೊದಲು ರಾಜಕೀಯವಾಗಿ ಹೇಳುತ್ತಿದ್ದರು. ವಾಸ್ತವಿಕತೆಯ ಆಧಾರದ ಮೇಲೆ ಮಾತನಾಡುತ್ತಿರಲಿಲ್ಲ ಎಂದು ಅರ್ಥವಾಗುತ್ತದೆ ಅಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.

ಪಾಕಿಸ್ತಾನದ ವಿಚಾರದಲ್ಲಿ ಕಾಂಗ್ರೆಸ್ ಬಗ್ಗೆ ಟೀಕಿಸಿರುವ ದೇವೇಗೌಡರು ಬಿಜೆಪಿ ಸೇರುವ ಮುನ್ನ ನರೇಂದ್ರ ಮೋದಿಯವರ ಬಗ್ಗೆ ಏನು ಮಾತನಾಡುತ್ತಿದ್ದರು? ಈಗ ಏನು ಮಾತನಾಡುತ್ತಿದ್ದಾರೆ? ಇಬ್ಬಗೆಯ ನೀತಿ ದೇವೇಗೌಡರಿಗೆ ಇದೆ, ನಮಗಲ್ಲ ಎಂದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version