8:53 AM Tuesday 11 - November 2025

40 ವರ್ಷಗಳಿಂದ ಕಾಂಕ್ರಿಟೀಕರಣವಾಗದ ಆಲೆಟ್ಟಿ ಕಲ್ಲರ್ಪೆ ರಸ್ತೆ: ಸ್ಥಳಕ್ಕೆ ಭೇಟಿ ನೀಡಿದ ಸಮಾಜಕಲ್ಯಾಣಾಧಿಕಾರಿ

aletti
04/03/2023

ಸುಳ್ಯ : ಸುಳ್ಯ ತಾಲೂಕು ಆಲೇಟಿ ಗ್ರಾಮದ ಕಲ್ಚರ್ಪೆ ರಸ್ತೆಗೆ 40 ವರ್ಷಗಳಿಂದ ಯಾವುದೇ ಅನುದಾನ ಬಾರದ ಹಿನ್ನೆಲೆಯಲ್ಲಿ ಬೇಸತ್ತ ಇಲ್ಲಿನ ಸ್ಥಳೀಯರು ಅಂಬೇಡ್ಕರ್ ರಕ್ಷಣಾ ವೇದಿಕೆಗೆ ತಿಳಿಸಿದ್ದು, ಇದೀಗ ಅಂಬೇಡ್ಕರ್ ರಕ್ಷಣಾ ವೇದಿಕೆಯವರು ಈ ಸಮಸ್ಯೆಯನ್ನು ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತಂದಿದ್ದಾರೆ.

ಗ್ರಾಮಸ್ಥರು ರಸ್ತೆ ಇಲ್ಲದೇ ಸಂಕಷ್ಟದಲ್ಲಿದ್ದು, ಇವರಿಗೆ ತಕ್ಷಣವೇ ರಸ್ತೆ ವ್ಯವಸ್ಥೆಯನ್ನು ಮಾಡಿಕೊಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಗೆ ಸಂಘಟನೆ ಮನವಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾದ ರವಿಕುಮಾರ್, ಆದಷ್ಟು ಬೇಗನೇ ಕಾಂಕ್ರಿಟೀಕರಣ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಅಂಬೇಡ್ಕರ್ ರಕ್ಷಣಾ  ವೇದಿಕೆಯ ಜಿಲ್ಲಾಧ್ಯಕ್ಷ ಪಿ.ಸುಂದರ ಪಾಟಾಜೆ,  ಅಬ್ದುಲ್ ಪರ್ವಸ್  ಗುರುಸ್ವಾಮಿ, ಬಿ.ಜಿ. ಗೀತಾ, ಭವ್ಯಾ, ಸರಸ್ವತಿ ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version