3:04 AM Wednesday 15 - October 2025

ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದೇ ಬಿಜೆಪಿ ಸರ್ಕಾರದ ಸಾಧನೆ: ಈಶ್ವರ ಖಂಡ್ರೆ

eshwarakhandre
23/01/2022

ಬೀದರ್‌: ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದೇ ಬಿಜೆಪಿ ಸರ್ಕಾರದ ಸಾಧನೆಯಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ  ಈಶ್ವರ ಖಂಡ್ರೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಸಮಿತಿಯಲ್ಲಿ ಯೋಜನೆಗಳಿಗೆ ಅನುಮೋದನೆ ದೊರೆತರೆ ಮಾತ್ರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅವಕಾಶ ಇದೆ.

ಆದರೆ, ಬಿಜೆಪಿ ಸರ್ಕಾರ ಮಂಡಳಿಗೆ ನಾಮನಿರ್ದೇಶನ ಮಾಡದೇ ಮೊದಲು ಹಣ ಬಳಸಿ ಎಂದು ಸೂಚಿಸುವ ಮೂಲಕ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 1,500 ಕೋಟಿ ರೂ. ಅನುದಾನ ಮೀಸಲಿಟ್ಟರೂ ಕೇವಲ 240 ಕೋಟಿ ರೂ. ಖರ್ಚು ಮಾಡಲಾಗಿದೆ. ಒಟ್ಟು 2,347 ಕಾಮಗಾರಿಗಳಲ್ಲಿ 469 ಕಾಮಗಾರಿಗಳು ಪ್ರಗತಿಯಲ್ಲಿವೆ. ಕೇವಲ 39 ಕಾಮಗಾರಿಗಳು ಪೂರ್ಣಗೊಂಡಿವೆ. 1,357 ಕಾಮಗಾರಿಗಳು ಪ್ರಾರಂಭವೇ ಆಗಿಲ್ಲ ಎಂದು ತಿಳಿಸಿದರು.

ಹೊಸ ಸರ್ಕಾರ ಬಂದು 30 ತಿಂಗಳು ಕಳೆದರೂ ಅಭಿವೃದ್ಧಿ ಮಂಡಳಿ ಸಮಿತಿ ರಚನೆಯಾಗಿಲ್ಲ. ಮಂಡಳಿಗೆ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಪೈಕಿ ಒಬ್ಬ ಸಚಿವರನ್ನು ಉಸ್ತುವಾರಿಯಾಗಿ ನೇಮಿಸಬೇಕು. 8 ಶಾಸಕರು, ಇಬ್ಬರು ವಿಧಾನ ಪರಿಷತ್ ಸದಸ್ಯರು, ತಲಾ ಒಬ್ಬರು ಸಂಸದ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ, ನಗರಸಭೆ ಅಧ್ಯಕ್ಷ, ಐವರು ತಜ್ಞರನ್ನು ನೇಮಕ ಮಾಡಬೇಕು. ಆದರೆ, ಸಮಿತಿಯನ್ನೇ ರಚಿಸಿಲ್ಲ ಎಂದರು.

ಬೆಳೆ ವಿಮೆಯಿಂದ ವಿಮಾ ಕಂಪೆನಿಗಳಿಗೆ ಹೆಚ್ಚಿನ ಲಾಭವಾಗಿದೆಯೇ ಹೊರತು ರೈತರಿಗೆ ಆಗಿಲ್ಲ. ಕಳೆದ ವರ್ಷ ವಿಮಾ ಕಂಪೆನಿ 60 ಕೋಟಿ ರೂ. ಲಾಭ ಪಡೆದುಕೊಂಡಿದೆ. ಕಳೆದ ವರ್ಷ ಕಂಪೆನಿಯ ವೆಬ್‌ಲಿಂಕ್‌ ಸರಿ ಇರಲಿಲ್ಲ. ಸಹಾಯವಾಣಿಯೂ ಸರಿಯಾಗಿ ಕಾರ್ಯನಿರ್ವಹಿಸಲಿಲ್ಲ. ಹೀಗಾಗಿ ರೈತರು ಹೆಚ್ಚು ತೊಂದರೆ ಅನುಭವಿಸಬೇಕಾಯಿತು. ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಸಮಿತಿ ರಚಿಸಿ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಶಾಸಕ ರಾಜಶೇಖರ ಪಾಟೀಲ ಮತ್ತು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಒಡಿಶಾದಲ್ಲಿ ವಿಷಾಹಾರ ಸೇವಿಸಿದ್ದ ಕಾರ್ಕಳದ ಯುವಕ ಸಾವು

ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ನಿಧನ

ಬಸ್ ​ನಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ; ಯುವಕನಿಗೆ ಧರ್ಮದೇಟು

ನಿರ್ಮಾಪಕ ಉಮಾಪತಿ ಕೊಲೆಯತ್ನ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಸೆರೆ

ಮಗುವನ್ನು ಕೊಂದು ಕಪಾಟುವಿನಲ್ಲಿಟ್ಟಿದ್ದ ಕಿರಾತಕಿಯ ಬಂಧನ

 

ಇತ್ತೀಚಿನ ಸುದ್ದಿ

Exit mobile version