ಸುಳ್ಯ: ಅಜ್ಜಾವರ ಹಿರಿಯ ಪ್ರಾಥಮಿಕ ಶಾಲೆಯ ಬಡ 10 ಮಕ್ಕಳಿಗೆ ನೋಟ್ ಬುಕ್ ವಿತರಣೆ

15/06/2024
ಸುಳ್ಯ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಅಜ್ಜಾವರ, ಮೇಲಾಲ ಶಾಲೆಯ ಬಡ 10 ಜನ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಿಸಲಾಯಿತು.
ಮೇನಾಲ ಶಾಲಾ ಹಳೆ ವಿದ್ಯಾರ್ಥಿಯಾದ ಸೌದಿ ಅರೇಬಿಯಾದಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿರುವ ಶರೀಫ್ ಬಾಬಾ ಮೇನಾಲ ಮತ್ತು ಮೇನಾಲ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಸೌಕತ್ ಆಲಿ ಮೇನಾಲ ಅವರು ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಈ ಕೊಡುಗೆ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಯರಾದ ಕನಕ ಟೀಚರ್, ಲತಾ ಮೇಡಂ, ಉಷಾ ಮೇಡಂ ಮತ್ತು ಅಂಬೇಡ್ಕರ್ ಆದರ್ಶ ಸೇವಾ ಸಮಿತಿಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಪಲ್ಲತ್ತಡ್ಕ ಉಪಸ್ಥಿತರಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97