ಅರುಣ್ ಪುತ್ತಿಲ ವಿರುದ್ಧ ಸುಮೋಟೋ ಪ್ರಕರಣ ದಾಖಲು - Mahanayaka
3:21 PM Tuesday 16 - September 2025

ಅರುಣ್ ಪುತ್ತಿಲ ವಿರುದ್ಧ ಸುಮೋಟೋ ಪ್ರಕರಣ ದಾಖಲು

arun puttila
07/10/2023


Provided by

ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡದಲ್ಲಿ ಇಂದು ಭೇಟಿ ನೀಡಿದ್ದ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ.

ಅರುಣ್ ಕುಮಾರ್ ಪುತ್ತಿಲ್ಲ ರಾಗಿಗುಡ್ಡದಲ್ಲಿ ಸೆಕ್ಷನ್ ಜಾರಿ ಇದ್ದರೂ ಆಯುಧ ಪೂಜೆಯ ದಿನ ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡಿ ಎಂದು ಕರೆ ನೀಡಿರುವುದು ಪ್ರಚೋದನೆಗೆ ಪುಷ್ಟಿ ನೀಡಿದೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುಮೋಟೋ ದೂರು ದಾಖಲಿಸಿದ್ದಾರೆ

ಸ್ಪ್ಯಾನರ್, ಸ್ಕ್ರೂ ಡ್ರೈವರ್ ಹೊರತು ಪಡಿಸಿ ತಲ್ವಾರ್ ಪೂಜೆಗೆ ಕರೆ ನೀಡಿದ್ದ ಪುತ್ತಿಲ ವಿರುದ್ಧ ಐಪಿಸಿ ಸೆಕ್ಷನ್ 153(a) ಅಡಿ ಪ್ರಕರಣ ದಾಖಲಿಸಲಾಗಿದೆ.

144 ಅಡಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಕೋಮುಗಳ ನಡುವೆ ದ್ವೇಷದ ಭಾವನೆ ಮೂಡುವಂತಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದ ರಾಗಿಗುಡ್ಡಕ್ಕೆ ನಿನ್ನೆಯಷ್ಟೆ ಪುತ್ತೂರು ಮೂಲದ ಹಿಂದೂ ಫೈರ್​ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಆಗಮಿಸಿದ್ದರು. ಅಲ್ಲಿ ಸಂತ್ರಸ್ತರ ಮನೆಗೆ ಭೇಟಿ ನೀಡಿ ಮಾತನಾಡಿದ್ದ ಅವರು, ಆಯುಧ ಪೂಜೆ ಸಂದರ್ಭದಲ್ಲಿ ತಲ್ವಾರ್ ಪೂಜೆ ಮಾಡಿ ಎಂದಿದ್ದರು.

ಅರುಣ್ ಕುಮಾರ ಪುತ್ತಿಲ ರಾಗಿಗುಡ್ಡಕ್ಕೆ ಬಂದು ಪುತ್ತೂರು ತಲುಪುವಷ್ಟರಲ್ಲಿ ಅವರ ವಿರುದ್ಧ ಶಿವಮೊಗ್ಗದ ಗ್ರಾಮಾಂತರ ಪೊಲೀಸ್ ಸ್ಟೇಷನ್​​ನಲ್ಲಿ ಎಫ್ಐಆರ್ ದಾಖಲಾಗಿದೆ.ಪೊಲೀಸರು ಸುಮುಟೋ ಕೇಸ್ ದಾಖಲಿಸಿದ್ದಾರೆ.

ರಾಗಿಗುಡ್ಡದಲ್ಲಿ 144 ಸೆಕ್ಷನ್​ ಜಾರಿಯಿದೆ. ಇದರ ನಡುವೆ ಅರುಣ್ ಕುಮಾರ್ ಪುತ್ತಿಲ ಪ್ರಚೋಧನಾಕಾರಿ ಹೇಳಿಕೆಯನ್ನು ನೀಡಿದ್ದಾರೆ ಎಂದು ಆರೋಪಿಸಿ ಪೊಲೀಸರು ಗ್ರಾಮಾಂತರ ಪೊಲೀಸ್ ಸ್ಟೇಷನ್​ನಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ