ಭುವಿಯಲ್ಲಿ ಸುನೀತಾ: ವಿಲಿಯಮ್ಸ್ ರ ಪರಿಣತಿಯನ್ನು ಬಳಸಿಕೊಳ್ಳಲು ನಾವು ರೆಡಿ ಎಂದ ಇಸ್ರೋ ಅಧ್ಯಕ್ಷ

19/03/2025

ಬಾಹ್ಯಾಕಾಶ ಸಂಶೋಧನೆಯಲ್ಲಿ ಸುನಿತಾ ವಿಲಿಯಮ್ಸ್ ಅವರ ಪರಿಣತಿಯನ್ನು ಬಳಸಿಕೊಳ್ಳಲು ನಾವು ಎದುರು ನೋಡುತ್ತಿದ್ದೇವೆ ಎಂದು ಇಸ್ರೋ ಅಧ್ಯಕ್ಷ ವಿ.ನಾರಾಯಣನ್ ಹೇಳಿದ್ದಾರೆ. ಬಾಹ್ಯಾಕಾಶ ಸಂಶೋಧನೆಯಲ್ಲಿ ನಿಮ್ಮ ಪರಿಣತಿಯನ್ನು ಬಳಸಿಕೊಳ್ಳಲು ನಾವು ಬಯಸುತ್ತೇವೆ ಎಂದು ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಇಸ್ರೋ ಅಧ್ಯಕ್ಷ ವಿ.ನಾರಾಯಣನ್, ಗಗನಯಾತ್ರಿ ಸುನಿತಾ ವಿಲಿಯಮ್ಸ್ ರನ್ನು ಭೂಮಿಗೆ ಸುರಕ್ಷಿತವಾಗಿ ಮರಳಿ ತಂದಿರುವುದು ಗಮನಾರ್ಹ ಸಾಧನೆಯಾಗಿದೆ. ಇದು ಬಾಹ್ಯಾಕಾಶ ಪರಿಶೋಧನೆಯಲ್ಲಿ ನಾಸಾ, ಸ್ಪೇಸ್‌ಎಕ್ಸ್ ಮತ್ತು ಅಮೆರಿಕಕ್ಕಿರುವ ಬದ್ಧತೆಗೆ ಸಾಕ್ಷಿಯಾಗಿದೆ ಎಂದಿದ್ದಾರೆ.
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಮರಳಿರುವ ಸುನಿತಾ ರಿಗೆ ಸ್ವಾಗತ. ಇದೊಂದು ಅದ್ಭುತ ಸಾಧನೆಯಾಗಿದೆ. ನಿಮ್ಮ ಈ ಸಾಧನೆ ವಿಶ್ವದಾದ್ಯಂತ ಗಗನಯಾನದ ಉತ್ಸಾಹಿಗಳಿಗೆ ಸ್ಫೂರ್ತಿ ನೀಡಿದೆ ಎಂದು ಪೋಸ್ಟ್ ಮಾಡಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version