ಕಾಸರಗೋಡಿನ ರಸ್ತೆಯಲ್ಲಿ ನಡೆದುಕೊಂಡು ಬಂದ ಸನ್ನಿ ಲಿಯೋನ್: ವಿಡಿಯೋ ನೋಡಿ ಅಭಿಮಾನಿಗಳಿಗೆ ಅಚ್ಚರಿ

ಕಾಸರಗೋಡು: ಬಾಲಿವುಡ್ ನಟಿ ಸನ್ನಿ ಲಿಯೋನ್ ಕರಾವಳಿಯ ಕಾಸರಗೋಡಿನಲ್ಲಿ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ಅಚ್ಚರಿ ಸೃಷ್ಟಿಸಿದ್ದಾರೆ.
ರಸ್ತೆಯಲ್ಲಿ ನಡೆದುಕೊಂಡು ಬಂದ ಸನ್ನಿಲಿಯೋನ್, ಗೂಡ್ಸ್ ಆಟೋವೊಂದರ ಚಾಲಕನ ಬಳಿಯಲ್ಲಿ ನಗುತ್ತಾ, ಮಾತನಾಡುತ್ತಿರುವ ವಿಡಿಯೋವನ್ನು ವ್ಯಕ್ತಿಯೊಬ್ಬರು ಸೆರೆ ಹಿಡಿದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸನ್ನಿ ಲಿಯೋನ್ ಅವರು ಇತ್ತೀಚೆಗೆ ಮಲಯಾಳಂ ಚಿತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಮೂರು ಮಲಯಾಳಂ ಚಿತ್ರಗಳಲ್ಲಿ ಸನ್ನಿಲಿಯೋನ್ ಬಣ್ಣ ಹಚ್ಚಿದ್ದಾರೆ. ಇದೀಗ ನಾಲ್ಕನೇ ಸಿನಿಮಾದಲ್ಲಿ ಸನ್ನಿಲಿಯೋನ್ ನಟಿಸಲಿದ್ದಾರೆ.
ರಾಷ್ಟ್ರ ಪ್ರಶಸ್ತಿ ವಿಜೇತ ಪಂಪಲ್ಲಿ ನಿರ್ದೇಶನದ ಮಲಯಾಳಂ ಚಿತ್ರದಲ್ಲಿ ನಟಿಸಲು ಸನ್ನಿಲಿಯೋನ್ ಅವರು ಕಾಸರಗೋಡಿಗೆ ಆಗಮಿಸಿದ್ದಾರೆ ಎಂದು ಹೇಳಲಾಗಿದೆ. ಇದೀಗ ರಸ್ತೆ ಬದಿಯಲ್ಲೇ ಸನ್ನಿಲಿಯೋನ್ ಅವರು ನಡೆದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth