ಸುಂಟಿಕೊಪ್ಪ: ಈಜಲು ತೆರಳಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿಗಳು ನೀರುಪಾಲು - Mahanayaka
12:23 AM Saturday 17 - January 2026

ಸುಂಟಿಕೊಪ್ಪ: ಈಜಲು ತೆರಳಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿಗಳು ನೀರುಪಾಲು

drown water
17/01/2026

ಮಡಿಕೇರಿ: ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಗರಗಂದೂರು ಮಲ್ಲಿಕಾರ್ಜುನ ಕಾಲೋನಿಯ ಮಾದಾಪುರ ಹೊಳೆಯಲ್ಲಿ ಶನಿವಾರ ಸಂಜೆ ಈಜಲು ತೆರಳಿದ್ದ ಇಬ್ಬರು ಪಿಯುಸಿ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ.

ಸುಂಟಿಕೊಪ್ಪದ ಪಂಪ್‌ ಹೌಸ್ ನಿವಾಸಿಗಳಾದ ಮಹಮ್ಮದ್ ರಾಯಿಝ್‌ (16), ಮುಹಮ್ಮದ್ ನಿಹಾಲ್ (16) ಮೃತಪಟ್ಟ ವಿದ್ಯಾರ್ಥಿಗಳು ಅಂತಾ ತಿಳಿದು ಬಂದಿದೆ.

ಘಟನೆಯ ವಿವರ: ಮೃತರಿಬ್ಬರೂ ಖಾಸಗಿ ಕಾಲೇಜೊಂದರಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಶನಿವಾರ ಕಾಲೇಜು ಮುಗಿಸಿ ಮನೆಗೆ ಹಿಂದಿರುಗುವ ಸಂದರ್ಭದಲ್ಲಿ ಮಾದಾಪುರ ಹೊಳೆಯಲ್ಲಿ ಈಜಲು ನೀರಿಗಿಳಿದಿದ್ದಾರೆ. ಈ ವೇಳೆ ನೀರಿನ ಸುಳಿಯಲ್ಲಿ ಸಿಲುಕಿ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಿಷಯ ತಿಳಿದ ತಕ್ಷಣ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮೋಹನ್‌ರಾಜ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದರು. ಸ್ಥಳೀಯ ಈಜು ತಜ್ಞರ ಸಹಾಯದಿಂದ ವಿದ್ಯಾರ್ಥಿಗಳ ಮೃತದೇಹಗಳನ್ನು ಹೊಳೆಯಿಂದ ಹೊರತೆಗೆಯಲಾಗಿದೆ. ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇಬ್ಬರು ಯುವ ವಿದ್ಯಾರ್ಥಿಗಳ ಸಾವು ಸುಂಟಿಕೊಪ್ಪ ಪರಿಸರದಲ್ಲಿ ಶೋಕದ ವಾತಾವರಣ ನಿರ್ಮಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ