ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಅಧೀಕ್ಷಕ ಇಂಜಿನಿಯರ್ ಶಿವಕುಮಾರ್ ಸಾವು - Mahanayaka

ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಅಧೀಕ್ಷಕ ಇಂಜಿನಿಯರ್ ಶಿವಕುಮಾರ್ ಸಾವು

30/08/2023

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಆವರಣದ ಲ್ಯಾಬ್ ನಲ್ಲಿ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದ ಅಧೀಕ್ಷಕ ಇಂಜಿನಿಯರ್ ಶಿವಕುಮಾರ್ ಇಂದು‌ ಅಸುನೀಗಿದ್ದಾರೆ.

ಅಗ್ನಿ ದುರಂತದಲ್ಲಿ ಶಿವಕುಮಾರ್ ಅವರಿಗೆ ಶೇಕಡ 25 ರಷ್ಟು ಸುಟ್ಟ ಗಾಯಗಳಾಗಿದ್ದವು ಇದರಿಂದ ಬಳಲುತ್ತಿದ್ದ ಅವರು ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್ ನಲ್ಲಿ ಒಂದು ವಾರ ಚಿಕಿತ್ಸೆ ಪಡೆದುಕೊಂಡಿದ್ದರು, ಆದರೆ ಶ್ವಾಸಕೋಶ ನಿಷ್ಕ್ರಿಯವಾದ ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡಿ ಹೆಚ್ಚಿನ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು

ಶೇಷಾದ್ರಿಪುರಂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಕುಮಾರ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ

ಇತ್ತೀಚಿನ ಸುದ್ದಿ