ದೇಶದ ರಕ್ಷಣೆ, ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ಕೆ.ಎಸ್.ಈಶ್ವರಪ್ಪ
ಟಿ.ನರಸೀಪುರ: ದೇಶದ ರಕ್ಷಣೆ, ರಾಜ್ಯ ಮತ್ತು ದೇಶದ ಸರ್ವತೋಮುಖ ಅಭಿವೃದ್ಧಿಗೆ ನರೇಂದ್ರ ಮೋದಿಜಿ ಅವರ ನೇತೃತ್ವದ ಡಬಲ್ ಎಂಜಿನ್ ಸರಕಾರ ಅತ್ಯಗತ್ಯ ಎಂಬುದನ್ನು ಜನತೆ ಮನಗಂಡಿದ್ದಾರೆ ಎಂದು ಬಿಜೆಪಿ ಹಿರಿಯ ಮುಖಂಡ ಮತ್ತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.
ಟಿ.ನರಸೀಪುರದಲ್ಲಿ ಇಂದು ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಯ ರೋಡ್ ಷೋದಲ್ಲಿ ಅವರು ಮಾತನಾಡಿದರು. ಈಶಾನ್ಯ ರಾಜ್ಯಗಳ ಮೂರು ರಾಜ್ಯಗಳ ಚುನಾವಣೆಯಲ್ಲಿ ಎರಡು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇದು ಕರ್ನಾಟಕದ ಗೆಲುವಿನ ಬಗ್ಗೆ ಸ್ಪಷ್ಟ ಸಂದೇಶ ನೀಡುವಂತಿದೆ ಎಂದು ಅವರು ವಿಶ್ಲೇಷಿಸಿದರು.
ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ಬಿ.ವೈ ರಾಘವೇಂದ್ರ, ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಜಿಲ್ಲಾಧ್ಯಕ್ಷರಾದ ಶ್ರೀಮತಿ ಮಂಗಳ ಸೋಮಶೇಖರ್, ಸ್ಥಳೀಯ ಮುಖಂಡರು ಈ ರೋಡ್ ಷೋದಲ್ಲಿ ಭಾಗವಹಿಸಿದ್ದರು. ರೋಡ್ ಷೋ ಕಾರ್ಯಕ್ರಮವು ಸಾವಿರಾರು ಜನ ಸಾರ್ವಜನಿಕರು, ಕಾರ್ಯಕರ್ತರನ್ನು ಸೆಳೆಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























