ಎಸ್ ಸಿ, ಎಸ್ ಟಿ ಒಳಮೀಸಲಾತಿಗೆ ಸುಪ್ರೀಂ ಕೋರ್ಟ್ ಸಮ್ಮತಿ
ನವದೆಹಲಿ: ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಉಪವರ್ಗೀಕರಿಸುವ ಹಕ್ಕು ರಾಜ್ಯಗಳಿಗಿದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ಆ ಮೂಲಕ 2004ರಲ್ಲಿ ಇ.ವಿ.ಚಿನ್ನಯ್ಯ ವರ್ಸಸ್ ಆಂಧ್ರ ಪ್ರದೇಶ ಸರ್ಕಾರ ಪ್ರಕರಣದಲ್ಲಿ ನೀಡಲಾಗಿದ್ದ ತೀರ್ಪನ್ನು ರದ್ದುಗೊಳಿಸಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯ ಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠದಲ್ಲಿ ಒಬ್ಬರನ್ನು ಹೊರತುಪಡಿಸಿ (ನ್ಯಾ. ಬೇಲಾ ತ್ರಿವೇದಿ) ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಇದ್ದ ನ್ಯಾಯಪೀಠ ಈ ಮಹತ್ವದ ತೀರ್ಪು ಪ್ರಕಟಿಸಿದೆ.
ಅಟಾರ್ನಿ ಜನರಲ್ ಆರ್.ವೆಂಕಟರಮಣಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತಿತರರ ವಾದ ಆಲಿಸಿದ ಬಳಿಕ ಸುಪ್ರೀಂಕೋರ್ಟ್ ಫೆಬ್ರವರಿ 8ರಂದು ಆದೇಶವನ್ನು ಕಾಯ್ದಿರಿಸಿತ್ತು. ಇದು ಪರಿಶಿಷ್ಟ ಜಾತಿಗಳನ್ನು ಗುರುತಿಸಲು 341 ನೇ ವಿಧಿಯ ಅಡಿಯಲ್ಲಿ ರಾಷ್ಟಪತಿಗಳ ವಿಶೇಷ ಅಧಿಕಾರವನ್ನು ಉಲ್ಲಂಸುವುದಿಲ್ಲ. ಉಪ-ವರ್ಗೀಕರಿಸುವ ರಾಜ್ಯಗಳ ಅಧಿಕಾರವು ನ್ಯಾಯಾಂಗ ಪರಿಶೀಲನೆಗೆ ಒಳಪಟ್ಟಿರುತ್ತದೆ ಎಂದು ಅದು ಹೇಳಿದೆ.
ಏಳು ನ್ಯಾಯಮೂರ್ತಿಗಳೆಲ್ಲರೂ ಒಳಮೀಸಲಾತಿಯ ಬಗ್ಗೆ ತಮ ತೀರ್ಪನ್ನು ನೀಡಿದ್ದಾರೆ. ಉಳಿದ ಆರು ಮಂದಿಯ ತೀರ್ಪುಗಳು ಪರಿಶಿಷ್ಟ ಜಾತಿ, ಪಂಗಡಗಳ ಉಪವರ್ಗೀರಣಕ್ಕೆ ಹಾಗೂ ಆ ಮೂಲಕ ಒಳಮೀಸಲಾತಿಯ ಪರವಾಗಿದ್ದವು. ಹಾಗಾಗಿ, 6:1 ಅನುಪಾತದಡಿ, ಉಪವರ್ಗೀಕರಣ ಆಧಾರಿತ ಮೀಸಲಾತಿಗೆ ನ್ಯಾಯಪೀಠ ಅಸ್ತು ಹೇಳಿದಂತಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: