1:03 AM Wednesday 20 - August 2025

ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ: ಸುಪ್ರೀಂ ಕೋರ್ಟ್ ಹೇಳಿದ್ದೇನು?

08/11/2024

ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದ ಅಲ್ಪಸಂಖ್ಯಾತ ಸ್ಥಾನಮಾನದ ಕುರಿತು ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.

ಅಲಿಘರ್ ಮುಸ್ಲಿಂ ವಿವಿ ʼಅಲ್ಪಸಂಖ್ಯಾತ ಸ್ಥಾನಮಾನʼ ಯಾರು ಸ್ಥಾಪಿಸಿದರು ಎಂಬುದರ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ ಎಂದು ಪೀಠ ಹೇಳಿದೆ. ಸುಪ್ರೀಂ ಕೋರ್ಟ್ ನ 7 ನ್ಯಾಯಾಧೀಶರ ಪೀಠ 4 ತೀರ್ಪನ್ನು ನೀಡಿದ್ದು, 1967ರ ಅಝೀಝ್ ಬಾಷಾ vs ಯೂನಿಯನ್ ಆಫ್ ಇಂಡಿಯಾದ ತೀರ್ಪನ್ನು ರದ್ದುಗೊಳಿಸಿದೆ
ವಿಶ್ವವಿದ್ಯಾಲಯದ ಅಲ್ಪಸಂಖ್ಯಾತ ಸ್ಥಾನಮಾನವನ್ನು ಹೊಸದಾಗಿ ನಿರ್ಧರಿಸಲು ಮೂವರು ನ್ಯಾಯಾಧೀಶರ ಸಮಿತಿಯನ್ನು ರಚಿಸಲಾಗಿದೆ ಎಂದು ನ್ಯಾಯಾಲಯ ಹೇಳಿದ್ದು, ಇದೀಗ ಹೊಸ ಪೀಠವು ಎಎಂಯುಗೆ ಅಲ್ಪಸಂಖ್ಯಾತ ಸ್ಥಾನಮಾನ ನೀಡುವ ಮಾನದಂಡವನ್ನು ನಿರ್ಧರಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಸಿಜೆಐ ಸೇರಿದಂತೆ ನಾಲ್ವರು ನ್ಯಾಯಾಧೀಶರು ಈ ವಿಷಯದ ಬಗ್ಗೆ ಸರ್ವಾನುಮತದ ತೀರ್ಪು ನೀಡಿದರೆ, ಮೂವರು ನ್ಯಾಯಾಧೀಶರು ಅಸಮ್ಮತಿ ಸೂಚಿಸಿದ್ದಾರೆ.
ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಿದವರು ಯಾರು ಮತ್ತು ಅದರ ಹಿಂದಿನ ಕರ್ತೃ ಯಾರು ಎಂಬುದನ್ನು ನ್ಯಾಯಾಲಯವು ಪರಿಶೀಲಿಸಬೇಕು. ಪರಿಶೀಲನೆಯಲ್ಲಿ ಅಲ್ಪಸಂಖ್ಯಾತ ಸಮುದಾಯ ಸ್ಥಾಪಿಸಿರುವುದು ಬಯಲಾದರೆ, ಸಂಸ್ಥೆಯು 30ನೇ ವಿಧಿಯ ಪ್ರಕಾರ ಅಲ್ಪಸಂಖ್ಯಾತ ಸ್ಥಾನಮಾನವನ್ನು ಪಡೆಯಬಹುದು ಎಂದು ಸುಪ್ರೀಂಕೋರ್ಟ್ ಪೀಠವು ಹೇಳಿದೆ.

ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯವು ಅಲ್ಪಸಂಖ್ಯಾತ ಸಂಸ್ಥೆಯೇ ಎಂಬ ವಿಷಯವನ್ನು ಈಗ ನಿರ್ಧರಿಸಲು ಸಾಮಾನ್ಯ ಪೀಠಕ್ಕೆ ಅವಕಾಶ ನೀಡಲಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಇತ್ತೀಚಿನ ಸುದ್ದಿ

Exit mobile version