ಮೌಲಾ ಮಸೀದಿಯಲ್ಲಿ ಉತ್ಖನನ ನಡೆಸಬೇಡಿ: ಸುಪ್ರೀಂ ಕೋರ್ಟ್ ಆದೇಶ - Mahanayaka

ಮೌಲಾ ಮಸೀದಿಯಲ್ಲಿ ಉತ್ಖನನ ನಡೆಸಬೇಡಿ: ಸುಪ್ರೀಂ ಕೋರ್ಟ್ ಆದೇಶ

02/04/2024


Provided by

ಮಧ್ಯಪ್ರದೇಶದ ಭೋಜಶಾಲಾ ದೇವಸ್ಥಾನ-ಕಮಾಲ್ ಮೌಲಾ ಮಸೀದಿ ಸಂಕೀರ್ಣದಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಯಾವುದೇ ಭೌತಿಕ ಉತ್ಖನನವನ್ನು ನಡೆಸಬಾರದು ಎಂದು ಸರ್ವೋಚ್ಚ ನ್ಯಾಯಾಲಯವು ಆದೇಶಿಸಿದೆ. ಸಂಕೀರ್ಣದಲ್ಲಿ ಸರ್ವೆ ನಡೆಸಲು ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ಆದೇಶಿಸತ್ತು. ಇದರ ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ವಿವಾದಿತ ಸ್ಥಳ ‘ಭೋಜಶಾಲಾ ಮತ್ತು ಕಮಾಲ್ ಮೌಲಾ ಮಸೀದಿ’ ಸಂಕೀರ್ಣದಲ್ಲಿ ಸಮೀಕ್ಷೆ ನಡೆಸುವಂತೆ ಎಎಸ್‌ಐಗೆ ನಿರ್ದೇಶನ ನೀಡಿರುವ ಮಧ್ಯಪ್ರದೇಶ್ ಉಚ್ಚ ನ್ಯಾಯಾಲಯದ ಆದೇಶದ ವಿರುದ್ಧ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್ ಹೊರಡಿಸಿದ ಸರ್ವೋಚ್ಚ ನ್ಯಾಯಾಲಯವು, ತನ್ನ ಅನುಮತಿಯಿಲ್ಲದೆ ಎಎಸ್‌ಐ ಸಮೀಕ್ಷೆಯ ಫಲಿತಾಂಶದ ಆಧಾರದಲ್ಲಿ ಯಾವುದೇ ಕ್ರಮವನ್ನು ತೆಗೆದುಕೊಳ್ಳಬಾರದು ಎಂದು ಮಧ್ಯಂತರ ಆದೇಶದಲ್ಲಿ ತಿಳಿಸಿದೆ.

ಸಂಕೀರ್ಣದ ಆವರಣದ ಸ್ವರೂಪವನ್ನು ಬದಲಿಸುವ ಯಾವುದೇ ಭೌತಿಕ ಉತ್ಖನನವನ್ನು ನಡೆಸುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ