ನೋಟಾಗೆ ಹೆಚ್ಚು ಮತ ಬಂದ್ರೆ ಏನ್ ಮಾಡೋದು..? ಸುಪ್ರೀಂ ಕೋರ್ಟ್ ಹೇಳಿದ್ದೇನು..?

ಅಭ್ಯರ್ಥಿಗಳಿಗಿಂತ ‘ನೋಟಾ’ಗೆ ಹೆಚ್ಚು ಮತಗಳು ಬಂದರೆ ಏನು ಮಾಡಬೇಕೆಂಬ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದೆ.
ಫಲಿತಾಂಶದಲ್ಲಿ ಅಭ್ಯರ್ಥಿಗಳಿಗಿಂತ ಮೇಲಿನ ಯಾರಿಗೂ ಮತವಿಲ್ಲ ಎಂದು ಸೂಚಿಸುವ ‘ನೋಟಾ’ ಗೆ ಹೆಚ್ಚು ಮತಗಳು ಲಭಿಸಿದರೆ ಹೊಸದಾಗಿ ಚುನಾವಣೆಗಳನ್ನು ನಡೆಸಬೇಕೆಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಲೇಖಕ ಹಾಗೂ ಭಾಷಣಕಾರರಾದ ಶಿವ ಖೇರಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅಭ್ಯರ್ಥಿಗಳಿಗಿಂತ ‘ನೋಟಾ’ಗೆ ಹೆಚ್ಚು ಮತಗಳು ಬಂದರೆ ನಿಯಮಗಳನ್ನು ರೂಪಿಸಬೇಕು ಹಾಗೂ ನಿರ್ದಿಷ್ಟ ಕ್ಷೇತ್ರದಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳನ್ನು 5 ವರ್ಷಗಳವರೆಗೂ ಚುನಾವಣೆಯಿಂದ ನಿಷೇಧಿಸಬೇಕು ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
ನೋಟಾವನ್ನು ‘ಕಾಲ್ಪನಿಕ ಅಭ್ಯರ್ಥಿ’ ಎಂದು ಪ್ರಚಾರಗೊಳಿಸುವ ನಿಟ್ಟಿನಲ್ಲಿ ನಿಯಮಗಳನ್ನು ರೂಪಿಸುವ ಅಗತ್ಯವಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth