ಸಿಎಂ ಸಿದ್ದರಾಮಯ್ಯಗೆ 10 ಸಾವಿರ ದಂಡ ವಿಧಿಸಿದ್ದ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ

ನವದೆಹಲಿ: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದ್ದು, ಮುಂದಿನ ಆದೇಶದವರೆಗೆ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
ಕಳೆದ 2022ರಲ್ಲಿ ಅಂದಿನ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಸಿದ್ದರಾಮಯ್ಯ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆ ವಿರುದ್ಧ ಕೇಸ್ ದಾಖಲಾಗಿದ್ದು, ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿತ್ತು.
ಈ ಪ್ರಕರಣಕ್ಕೆ ಇದೀಗ ಸುಪ್ರೀಂಕೋರ್ಟ್ನಿಂದ ತಡೆಯಾಜ್ಞೆ ಸಿಕ್ಕಿದೆ. ಮುಂದಿನ ಆದೇಶದವರೆಗೂ ತಡೆಯಾಜ್ಞೆ ನೀಡಿರುವ ನ್ಯಾಯಾಲಯ, ಪ್ರತಿವಾದಿಗಳಿಗೆ 6 ವಾರಗಳಲ್ಲಿ ಉತ್ತರಿಸಲು ಸೂಚನೆ ನೀಡಿದೆ.
ತಮ್ಮ ವಿರುದ್ಧ ಹೈಕೋರ್ಟ್ 10 ಸಾವಿರ ರೂಪಾಯಿ ದಂಡ ವಿಧಿಸಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಕೋರ್ಟ್ಗೆ ಅರ್ಜಿಗೆ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ನ ಜಸ್ಟೀಸ್ ಋಷಿಕೇಶ್ ರಾಯ್ ಅವರ ಪೀಠದಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಿತು.
ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ಹಾಗೂ ಕಪಿಲ್ ಸಿಬಲ್ ವಾದ ಮಂಡಿಸಿದರು.