ಹಿಜಾಬ್ ನಿಷೇಧಕ್ಕೆ ಸುಪ್ರೀಂಕೋರ್ಟ್ ತಡೆ: ‘ತಿಲಕ ಹಾಕಿದ್ರೆ ಏನ್ ಮಾಡ್ತೀರಾ? ಎಂದು ಪ್ರಶ್ನಿಸಿದ ನ್ಯಾಯಾಲಯ

ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಹಿಜಾಬ್, ಬುರ್ಕಾ, ಕ್ಯಾಪ್ ಅಥವಾ ಬ್ಯಾಡ್ಜ್‌ಗಳನ್ನು ಧರಿಸುವುದನ್ನು ನಿಷೇಧಿಸಿ ಮುಂಬೈನ ಖಾಸಗಿ ಕಾಲೇಜು ನೀಡಿದ್ದ ಸೂಚನೆಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆ ನೀಡಿದೆ. ತಿಲಕವನ್ನು ಹಾಕಿದವರನ್ನು ಅನುಮತಿಸಲಾಗುವುದಿಲ್ಲ ಎಂದು ನೀವು ಹೇಳುತ್ತೀರಾ” ಎಂದು ಇದೇ ವೇಳೆ ನ್ಯಾಯಾಲಯ ಪ್ರಶ್ನಿಸಿದೆ.
ಮುಂಬೈನ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಮಧ್ಯಂತರ ಆದೇಶ ನೀಡಿದೆ. ಕಾಲೇಜು ನೀಡಿದ ಸೂಚನೆಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿದಿತ್ತು. ಬಾಂಬೆ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಸಂಜಯ್ ಕುಮಾರ್ ರ ಪೀಠವು ಕಾಲೇಜು ವಿಧಿಸಿರುವ ಈ ಷರತ್ತಿನ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದೆ.
“ಯಾರೂ ಕೂಡಾ ಧರ್ಮ ತಿಳಿಯುವಂತೆ ಇರಬಾರದೆ? ಏನಿದು” ಎಂದು ಪೀಠವು ಪ್ರಶ್ನಿಸಿದ್ದು, ಕಾಲೇಜನ್ನು ಪ್ರತಿನಿಧಿಸಿದ ಹಿರಿಯ ವಕೀಲ ಮಾಧವಿ ದಿವಾನ್, “ಇದೊಂದು ಖಾಸಗಿ ಸಂಸ್ಥೆ” ಎಂದರು.
ಈ ವೇಳೆ “ಕಾಲೇಜು ಯಾವಾಗಿನಿಂದ ಕಾರ್ಯನಿರ್ವಹಿಸುತ್ತಿದೆ” ಎಂದು ಸಂಜಯ್ ಕುಮಾರ್ ಪ್ರಶ್ನಿಸಿದ್ದಾರೆ. 2008ರಿಂದ ಕಾಲೇಜು ಅಸ್ತಿತ್ವದಲ್ಲಿದೆ ಎಂದು ಕಾಲೇಜು ಪರ ವಕೀಲರು ಹೇಳುತ್ತಿದ್ದಂತೆ ನ್ಯಾಯಮೂರ್ತಿ ಕುಮಾರ್, “ಇಷ್ಟು ವರ್ಷಗಳಿಂದ ಸೂಚನೆ ನೀಡಿರಲಿಲ್ಲ. ಈಗ ಇದ್ದಕ್ಕಿದ್ದಂತೆ ನಿಮಗೆ ಧರ್ಮದ ಬಗ್ಗೆ ತಿಳಿಯಿತೆ? ಇಷ್ಟು ವರ್ಷಗಳ ನಂತರ ನೀವು ಅಂತಹ ಸೂಚನೆಗಳನ್ನು ನೀಡುತ್ತಿರುವುದು ದುರದೃಷ್ಟಕರ” ಎಂದು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth