ಸುಪ್ರೀಂಕೋರ್ಟ್ ನಲ್ಲಿ ವಿವಾದಾತ್ಮಕ ಸಿಎಎಗೆ ಸಂಬಂಧಿಸಿದ 200ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆ

19/03/2024

ವಿವಾದಾತ್ಮಕ ಪೌರತ್ವ (ತಿದ್ದುಪಡಿ) ಕಾಯ್ದೆ, 2019 (ಸಿಎಎ) ಗೆ ಸಂಬಂಧಿಸಿದ 200 ಕ್ಕೂ ಹೆಚ್ಚು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಚಾರಣೆ ನಡೆಸಲಿದೆ. ಸಿಎಎ ಮತ್ತು ಪೌರತ್ವ ತಿದ್ದುಪಡಿ ನಿಯಮಗಳು 2024 ರ ಅನುಷ್ಠಾನಕ್ಕೆ ತಡೆ ನೀಡುವಂತೆ ಅರ್ಜಿಗಳು ಕೋರಿವೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ಈ ಅರ್ಜಿಗಳ ವಿಚಾರಣೆ ನಡೆಸಲಿದೆ.

ಕಳೆದ ವಾರ, ಕೇರಳ ಮೂಲದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಮನವಿಯನ್ನು ಉಲ್ಲೇಖಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಲೋಕಸಭಾ ಚುನಾವಣೆಗಳು ವೇಗವಾಗಿ ಸಮೀಪಿಸುತ್ತಿರುವುದರಿಂದ ವಿವಾದಾತ್ಮಕ ಕಾನೂನನ್ನು ಜಾರಿಗೆ ತರುವ ಕೇಂದ್ರದ ಕ್ರಮ ಪ್ರಶ್ನಾರ್ಹವಾಗಿದೆ ಎಂದು ಹೇಳಿದ್ದಾರೆ.

ಸಿಎಎ, ಧರ್ಮದ ಆಧಾರದ ಮೇಲೆ ಮುಸ್ಲಿಮರ ವಿರುದ್ಧ ತಾರತಮ್ಯ ಮಾಡುತ್ತದೆ ಎಂದು ಕಾನೂನನ್ನು ಪ್ರಶ್ನಿಸಿದ ಅನೇಕ ಮಂದಿ ಅರ್ಜಿದಾರರು ಸಲ್ಲಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version