ಅಸಹಜ ಲೈಂಗಿಕ ದೌರ್ಜನ್ಯ:  ಸೂರಜ್‌ ರೇವಣ್ಣ ಬಂಧನ | ಇಲ್ಲಿದೆ ವಿವರ

suraj revanna
23/06/2024

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ಗೆ ಸಂಬಂಧಪಟ್ಟಂತೆ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ ಮಾಡಲಾಗಿದೆ.

ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿಯೇ ಡಾ.ಸೂರಜ್‌ರೇವಣ್ಣ ಅವರನ್ನು ರಾತ್ರಿ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿನ್ನೆ ರಾತ್ರಿ 4 ಗಂಟೆ ವರೆಗೂ ವಿಚಾರಣೆ ನಡೆಸಿರುವ ಪೊಲೀಸರು ನಂತರ ಬಂಧನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಎಂಎಲ್ ಸಿ ಸೂರಜ್ ರೇವಣ್ಣ ಅವರು ಸಂತ್ರಸ್ಥ ಯುವಕನ ವಿರುದ್ಧ ದೂರು ನೀಡಲು ಬಂದಾಗ ಪೊಲೀಸ್ ಠಾಣೆಯಲ್ಲೇ ಅವರನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ.

ಇನ್ನೂ ತನ್ನ ವಿರುದ್ಧ ಕೇಳಿ ಬಂದ ಆರೋಪದ ಬಗ್ಗೆ ನಿನ್ನೆ ಪ್ರತಿಕ್ರಿಯಿಸಿದ್ದ ಸೂರಜ್ ರೇವಣ್ಣ,  ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ಕಾನೂನಿನಲ್ಲಿ ತನಿಖೆ ಆಗಲಿ, ಸತ್ಯಾಸತ್ಯತೆ ಹೊರಗೆ ಬರಲಿ ಅಂತ ಸೂರಜ್‌ ಹೇಳಿದ್ದರು.

ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ವಿರುದ್ಧ ಐಪಿಸಿ ಸೆಕ್ಷೆನ್ 377,342,506 ಅಡಿ ಪ್ರಕರಣ ದಾಖಲಾಗಿದೆ. ಜಾಮೀನು ರಹಿತ ಕೇಸ್ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸುದೀರ್ಘ ವಿಚಾರಣೆ ನಡೆಸಿದ್ದ ಪೊಲೀಸರು ಬಳಿಕ ಅರೆಸ್ಟ್ ಮಾಡಿದ್ದಾರೆ. ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಕುಮಾರ್ ಅವರು ಈ ಪ್ರಕರಣದ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version