10:59 PM Wednesday 10 - December 2025

ಟೋಲ್ ಹೋರಾಟ ಹಿನ್ನೆಲೆ:  ಟೋಲ್‌’ಗೇಟ್’ನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

section 144
28/10/2022

ಮಂಗಳೂರು: ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಟೋಲ್ ಗೇಟ್ ಸಮೀಪದ 200 ಮೀಟರ್  ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 6ರಿಂದ ನವೆಂಬರ್ 3ರ ಸಂಜೆ 6ರವರೆಗೆ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ವಿಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಎನ್‌’ಐಟಿಕೆ ಬಳಿಯ ಟೋಲ್ ಗೇಟ್’ನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಟೋಲ್’ಗೇಟ್ ವಿರೋಧಿ ಹೋರಾಟ ಸಮಿತಿ ಸುರತ್ಕಲ್ ಹಾಗೂ ಸಮಾನ ಮನಸ್ಕ ಸಂಘಟನೆ ವತಿಯಿಂದ ಇಂದಿನಿಂದ ಟೋಲ್ ಗೇಟ್ ಬಳಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುವುದಾಗಿ ಮಾಹಿತಿ ಇದ್ದು, ಈ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ, ಸಾರ್ವಜನಿಕರ ಸುರಕ್ಷತೆ ಕಾಪಾಡುವ ಮತ್ತು  ಟೋಲ್ ಗೇಟ್‌ನ ಭದ್ರತೆಯ ಹಿತದೃಷ್ಠಿಯಿಂದ ಸೆಕ್ಷನ್ ಜಾರಿ ಮಾಡಲಾಗಿದೆ‌. ಸುರತ್ಕಲ್ ಟೋಲ್ ಗೇಟ್ ತೆರವು ಗೊಳಿಸಲು ಆಗ್ರಹಿಸಿ ಟೋಲ್ ಗೇಟ್ ತೆರವು ಹೋರಾಟ‌ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳು ಅ.18ರಂದು ಟೋಲ್ ಗೇಟ್ ಗೆ ಮುತ್ತಿಗೆ ಹಾಕಿತ್ತು. ಆ ಬಳಿಕ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದ್ದರು. ಬಳಿಕ ಸುರತ್ಕಲ್ ಸಭಾಭವನದಲ್ಲಿ ಸಭೆ ನಡೆಸಿದ್ದ ಹೋರಾಟ ಸಮಿತಿ ಟೋಲ್ ಗೇಟ್ ತೆರವು ಗೊಳಿಸುವವರೆಗೂ ಅನಿರ್ಧಿಷ್ಟಾವಧಿ ಸತ್ಯಾಗ್ರಹ ನಡೆಸುವುದಾಗಿ ಪ್ರಕಟಿಸಿತ್ತು.

ಈ ನಡುವೆ ನಿನ್ನೆ ಹೋರಾಟ ಸಮಿತಿಯೊಂದಿಗೆ ಜಿಲ್ಲಾಧಿಕಾರಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಭೆ ನಡೆಸಿ, ಟೋಲ್ ಗೇಟ್ ತೆರವಿಗೆ ಇನ್ನೂ ಹತ್ತು ದಿನಗಳ‌ ಅವಧಿ ನೀಡುವಂತೆ ಮನವಿ ಮಾಡಿದ್ದರು. ಇದನ್ನು ಸಮಿತಿ ಸಭೆಯಲ್ಲೇ ಖಂಡಿಸಿದ್ದು, ಸಮಿತಿ ನಿರ್ಧರಿಸಿದಂತೆ ಇಂದಿನಿಂದ ಆಹೋರಾತ್ರಿ ಧರಣಿ ನಡೆಸುವುದಾಗಿ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version