ಕೊನೆಗೂ ಸುರತ್ಕಲ್ ಟೋಲ್ ರದ್ದು: ಟ್ವಿಟ್ಟರ್ ನಲ್ಲಿ ನಳೀನ್ ಘೋಷಣೆ - Mahanayaka

ಕೊನೆಗೂ ಸುರತ್ಕಲ್ ಟೋಲ್ ರದ್ದು: ಟ್ವಿಟ್ಟರ್ ನಲ್ಲಿ ನಳೀನ್ ಘೋಷಣೆ

nain kumar kateel
14/11/2022

ಭಾರೀ ವಿವಾದಕ್ಕೆ ಕಾರಣವಾಗಿದ್ದ‌ ಮಂಗಳೂರು ನಗರದ ಸುರತ್ಕಲ್ ಟೋಲ್‌ಗೇಟ್ ವಿರುದ್ಧ ಟೋಲ್‌ ವಿರೋಧಿ ಹೋರಾಟ ಸಮಿತಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿದೆ. ಇದೀಗ ಟೋಲ್ ಸಂಗ್ರಹ ರದ್ದುಪಡಿಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

ಈ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಧಾನಿಗೆ ಕೃತಜ್ಞತೆ ಸಲ್ಲಿಸಿರುವ ಅವರು ‘ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು.

ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಟೋಲ್ ವಿರೋಧಿ ಹೋರಾಟ ಸಮಿತಿ ‘ಟೋಲ್ ರದ್ದು ಮಾಡಿರುವುದರ ಬಗ್ಗೆ ಅಧಿಕೃತ ಮಾಹಿತಿ ಬಂದು ಟೋಲ್ ತೆರವು ಮಾಡುವವರೆಗೂ ನಾವು ಅನಿರ್ದಿಷ್ಟಾವಧಿ ಅಹೋರಾತ್ರಿ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ’ ಎಂದು ಹೇಳಿದ್ದಾರೆ. ಇದೇ ವೇಳೆ ಟೋಲ್ ರದ್ದುಗೊಂಡ ವಿಷಯ ನನಗೆ ಗೊತ್ತಿಲ್ಲ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಮಂಗಳೂರು ವಿಭಾಗದ ಯೋಜನಾ ನಿರ್ದೇಶಕ ಲಿಂಗೇಗೌಡ ಪ್ರತಿಕ್ರಿಯಿಸಿದ್ದಾರೆ ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ