ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸ್ಥಾಪನೆಯಾಗಿದ್ದ ಸುರತ್ಕಲ್ ಟೋಲ್ ಗೇಟ್ ತೆರವಾಗಿದೆ: ಶಾಸಕ ವೈ.ಭರತ್ ಶೆಟ್ಟಿ
ಸುರತ್ಕಲ್ ಟೋಲ್ ಗೇಟ್ ಸ್ಥಾಪನೆಗೆ ಅಧಿಸೂಚನೆ ಪ್ರಕಟವಾಗಿದ್ದು ಕೇಂದ್ರದಲ್ಲಿ ಯುಪಿಎ ನೇತೃತ್ವದ ಸರ್ಕಾರದ ಅವಧಿಯಲ್ಲಿ. ಆಗ ರಾಜ್ಯದಲ್ಲೂ ಕಾಂಗ್ರೆಸ್ ಸರ್ಕಾರ ಇತ್ತು. ಆಗ ಸ್ಥಾಪಿಸಲಾದ ಟೋಲ್ ಗೇಟ್ ಈಗ ತೆರವಾಗುತ್ತಿದೆ’ ಎಂದು ಶಾಸಕ ವೈ.ಭರತ್ ಶೆಟ್ಟಿ ಹೇಳಿದರು.
ಮಂಗಳೂರು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುರತ್ಕಲ್ ಟೋಲ್ ಗೇಟ್ ಸ್ಥಾಪನೆಗೆ 2013ರ ಜೂನ್ ನಲ್ಲೇ ಅಧಿಸೂಚನೆ ಪ್ರಕಟವಾಗಿದೆ. ಆದರೆ, ಈಗ ಕೆಲವು ಕಾಂಗ್ರೆಸ್ ನಾಯಕರು ಟೋಲ್ ಗೇಟ್ ವಿರೋಧಿ ಹೋರಾಟಗಾರರ ಜೊತೆ ಸೇರಿಕೊಂಡು ಬಿಜೆಪಿ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಟೋಲ್ ಗೇಟ್ ಗೆ ಅಧಿಸೂಚನೆ ಪ್ರಕಟವಾದ ಕೂಡಲೇ ಅದನ್ನು ಕಾಂಗ್ರೆಸ್‌ನವರು ತಡೆಯಬಹುದಿತ್ತಲ್ಲವೇ. ಆಗ ಕೇಂದ್ರದಲ್ಲಿ ಕಾಂಗ್ರೆಸ್ ನ ಆಸ್ಕರ್ ಫರ್ನಾಂಡಿಸ್ ಅವರೇ ಭೂಸಾರಿಗೆ ಸಚಿವರಾಗಿದ್ದರಲ್ಲವೇ’ ಎಂದು ಪ್ರಶ್ನಿಸಿದರು.
‘ಸುರತ್ಕಲ್ ಟೋಲ್ ಗೇಟ್ ರದ್ದಾಗಬೇಕು ಎಂಬುದಕ್ಕೆ ನಮ್ಮ ಸಹಮತವೂ ಇದೆ. ಈ ಹೋರಾಟಕ್ಕೆ ನಮ್ಮ ತಕರಾರಿಲ್ಲ. ಇದರಲ್ಲಿ ನೈಜ ಹೋರಾಟಗಾರರೂ ಇದ್ದಾರೆ. ಆದರೆ, ಅದರ ವೇದಿಕೆಯಲ್ಲಿ ಹಿಂದುತ್ವದ ಕುರಿತ ಮಾತುಗಳನ್ನು ಏಕೆ ಆಡಬೇಕು. ಬಿಜೆಪಿ ವಿರುದ್ಧ ತುಳುನಾಡು ಎಂದು ಏಕೆ ಘೋಷಣೆ ಕೂಗಬೇಕು’ ಎಂದು ಅವರು ಪ್ರಶ್ನಿಸಿದರು.
‘ಸುರತ್ಕಲ್ ಟೋಲ್‌ಗೇಟನ್ನು ಹೆಜಮಾಡಿ ಟೋಲ್ ಗೇಟ್ ಜೊತೆ ವಿಲೀನ ಮಾಡಿರುವುದು ನಿಜ. ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಆಗುತ್ತಿದ್ದ ಸಮಸ್ಯೆ ನಿವಾರಣೆ ಆಗಲಿದೆ. ಒಗ್ಗಟ್ಟಿನಿಂದ ಹೋರಾಟ ನಡೆಸಿದರೆ ಈಗಲೂ ಟೋಲ್ ಸಂಗ್ರಹವನ್ನು ಸಂಪೂರ್ಣ ತಡೆಯಲು ಸಾಧ್ಯವಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka