ಸಿದ್ದರಾಮಯ್ಯ ಸಂಪುಟಕ್ಕೆ ಸರ್ಜರಿ ಸಾಧ್ಯತೆ: ಈ 6 ಸಚಿವರಿಗೆ ಸ್ಥಾನ ಕಳೆದುಕೊಳ್ಳುವ ಭೀತಿ! - Mahanayaka

ಸಿದ್ದರಾಮಯ್ಯ ಸಂಪುಟಕ್ಕೆ ಸರ್ಜರಿ ಸಾಧ್ಯತೆ: ಈ 6 ಸಚಿವರಿಗೆ ಸ್ಥಾನ ಕಳೆದುಕೊಳ್ಳುವ ಭೀತಿ!

siddaramaiah
10/07/2024

ಬೆಂಗಳೂರು: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಸಿಎಂ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿತ್ತು. ಆದರೆ ಸದ್ಯ ಸಿಎಂ ಬದಲಾವಣೆ ವಿಚಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿಲ್ಲ ಎಂದು ಹೇಳಲಾಗಿದೆ. ಈ ನಡುವೆ  ಸಿದ್ದರಾಮಯ್ಯ ಸರ್ಕಾರದ ಸಂಪುಟಕ್ಕೆ ಮೇಜರ್ ಸರ್ಜರಿಯಾಗಲಿದೆ ಎನ್ನಲಾಗುತ್ತಿದೆ.


Provided by

ಸರ್ಕಾರದಲ್ಲಿ ನಿಷ್ಕ್ರಿಯರಾಗಿರುವ ಸಚಿವರಿಗೆ ಗೇಟ್ ಪಾಸ್ ನೀಡಿ, ಹೊಸ ಉತ್ಸಾಹಿ ಶಾಸಕರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಹೈಕಮಾಂಡ್ ಹಾಗೂ ಸಿಎಂ, ಡಿಸಿಎಂ ತೀರ್ಮಾನಿಸಿದ್ದಾರೆ ಎನ್ನಲಾಗುತ್ತಿದೆ.

ಜಾತಿ, ಪ್ರದೇಶದ ಕಾರಣಕ್ಕಷ್ಟೇ ಸಚಿವ ಸ್ಥಾನ ಪಡೆದವರು, ತಮ್ಮ ಇಲಾಖೆಯಲ್ಲಿ ಚಾಪು ಮೂಡಿಸಲು ಸಾಧ್ಯವಾಗದ ಸಚಿವರು  ಸರ್ಕಾರದಲ್ಲಿ ಇರುವುದರಿಂದ ಪಕ್ಷಕ್ಕಾಗಲೀ ಸರ್ಕಾರಕ್ಕಾಗಲಿ ಯಾವುದೇ ಲಾಭ ಇಲ್ಲ, ಇದರ ಬದಲು ಪ್ರಭಾವಿಯಾಗಿ ಕೆಲಸ ಮಾಡಲು ಸಾಧ್ಯವಿರುವ ಉತ್ಸಾಹಿಗಳಿಗೆ ಕ್ಯಾಬಿನೆಟ್‌ ನಲ್ಲಿ ಅವಕಾಶ ಮಾಡಿಕೊಡುವುದು ಸೂಕ್ತ ಎಂದು ಪಕ್ಷದ ಹೈಕಮಾಂಡ್‌ ಸೂಚಿಸಿದೆ ಎಂದು ಹೇಳಲಾಗಿದೆ.

ಎರಡೂವರೆ ವರ್ಷ ತಮ್ಮ ಕುರ್ಚಿ ಭದ್ರ ಅಂದುಕೊಂಡಿದ್ದ ಸಚಿವರಿಗೆ ಇದೀಗ ಆತಂಕ ಶುರುವಾಗಿದೆ. ಜುಲೈ ತಿಂಗಳಲ್ಲಿ ವಿಧಾನಸಭೆಯ ಮುಂಗಾರು ಅಧಿವೇಶನ ಮುಗಿತಾ ಇದ್ದಂತೆ ಸಂಪುಟ ಪುನಾರಚನೆ ಆಗೋದು ಬಹುತೇಕ ಫೈನಲ್ ಆಗಿದೆ ಎಂದು ಹೇಳಲಾಗಿದೆ.

ಯಾವ ಸಚಿವರಿಗೆ ಸಚಿವ ಸ್ಥಾನ ಕಳೆದುಕೊಳ್ಳುವ ಭೀತಿ?

* ರಹೀಂ ಖಾನ್, ಪುರಸಭೆ,ಆಡಳಿತ-ಹಜ್‌ ಸಚಿವ

* ಆರ್.ಬಿ.ತಿಮ್ಮಾಪುರ, ಅಬಕಾರಿ ಸಚಿವ

* ಶಿವಾನಂದ ಪಾಟೀಲ್, ಸಕ್ಕರೆ ಸಚಿವ

* ಕೆ.ಎಚ್.ಮುನಿಯಪ್ಪ, ಆಹಾರ ಸಚಿವ

* ಚೆಲುವರಾಯ ಸ್ವಾಮಿ, ಕೃಷಿ ಸಚಿವ

* ದಿನೇಶ್‌ ಗುಂಡೂರಾವ್‌, ಆರೋಗ್ಯ ಸಚಿವ

ಈ 6 ಸಚಿವರ ಪೈಕಿ ಕನಿಷ್ಠ ಮೂರರಿಂದ ಐದು ಸಚಿವರನ್ನು ಸಂಪುಟದಿಂದ ಕೈಬಿಟ್ಟು ಹೊಸಬರಿಗೆ ಅವಕಾಶ ಮಾಡಿಕೊಡುವ ಸಾಧ್ಯತೆ ಇದೆ ಎನ್ನಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ