ಸೂರಿಕುಮೇರು: ಡಿವೈಡರ್ ಹತ್ತಿ ನಿಂತ ಕೆಎಸ್ ಆರ್‌ ಟಿಸಿ ಬಸ್

ksrtc bus
26/01/2026

ಮಾಣಿ: ಚಾಲಕನ ನಿಯಂತ್ರಣ ತಪ್ಪಿದ ಸರ್ಕಾರಿ ಬಸ್ಸೊಂದು ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಹತ್ತಿ ನಿಂತ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್, ಇಂದು ಮುಂಜಾನೆ ಸೂರಿಕುಮೇರಿನ ರಾಜ್ ಕಮಲ್ ಹಾಲ್ ಸಮೀಪ ತಲುಪಿದಾಗ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದ್ದು, ಬಸ್ ಡಿವೈಡರ್ ಮೇಲೆ ಏರಿ ನಿಂತಿದೆ.

ಘಟನೆಯಲ್ಲಿ ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version