ಹಾಸ್ಟೆಲ್ ನಲ್ಲಿ SSLC ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು

student
09/03/2024

ಕಲಬುರಗಿ: ಬಾಲಕಿಯರ ಹಾಸ್ಟೆಲ್ ನಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೋರ್ವಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾರುವ ಘಟನೆ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ.

ಚಿತ್ತಾಪುರ ತಾಲೂಕಿನ ಗ್ರಾಮವೊಂದರ  ಬಾಲಕಿ ಹಾಸ್ಟೆಲ್ ನಲ್ಲಿ ಉಳಿದುಕೊಂಡು ಶಾಲೆಗೆ ತೆರಳುತ್ತಿದ್ದಳು. ಆದರೆ ಇದೀಗ ಬಾಲಕಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಬಾಲಕಿಯ ಸಾವಿಗೆ ಕಾರಣಗಳೇನು ಎಂದು ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ,  ಘಟನೆ ಸಂಬಂಧ ಹಾಸ್ಟೆಲ್ ವಾರ್ಡನ್ ರೇಣುಕಾ ಮತ್ತು ಸಿಬ್ಬಂದಿ ವಿರುದ್ಧ ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿ ಸಾವಿಗೆ ಶರಣಾಗಿದ್ದಾಳೆಯೇ ಅಥವಾ  ಅಸಹಜ ಸಾವು ಪ್ರಕರಣವೇ ಎನ್ನುವುದು ಪೊಲೀಸರ ತನಿಖೆಯ ಬಳಿಕ ತಿಳಿದು ಬರಬೇಕಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version