ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರ ಅನುಮಾನಾಸ್ಪದ ಸಾವು!

20/03/2024
ಬೆಂಗಳೂರು: ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡ ಸ್ಥಿತಿಯಲ್ಲಿ ಸಾವಿಗೀಡಾಗಿರುವ ಘಟನೆ ಜೆ.ಪಿ.ನಗರದ ಮೂರನೇ ಹಂತದಲ್ಲಿ ನಡೆದಿದೆ.
ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಸುಕನ್ಯಾ(48), ನಿಖಿತ್(28) ಹಾಗೂ ನಿಶಿತ್(28) ಎಂದು ಗುರುತಿಸಲಾಗಿದೆ.
ಇವರ ಸಾವಿಗೆ ಇನ್ನೂ ನಿಖರ ಕಾರಣಗಳು ತಿಳಿದು ಬಂದಿಲ್ಲ, ಘಟನಾ ಸ್ಥಳಕ್ಕೆ ಜೆ.ಪಿನಗರ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯರು ಹಾಗೂ ಸಂಬಂಧಿಕರಿಂದ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಇನ್ನಷ್ಟು ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ…
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth