ಹೆಣ್ಣುಮಕ್ಕಳು ಸ್ವಾಮಿಗಳ ಬಳಿ ಹೋಗಲಾರದಂತ ಸ್ಥಿತಿ ನಿರ್ಮಾಣವಾಗಿದೆ: ಶಾಮನೂರು ಶಿವಶಂಕರಪ್ಪ - Mahanayaka
11:33 PM Saturday 24 - January 2026

ಹೆಣ್ಣುಮಕ್ಕಳು ಸ್ವಾಮಿಗಳ ಬಳಿ ಹೋಗಲಾರದಂತ ಸ್ಥಿತಿ ನಿರ್ಮಾಣವಾಗಿದೆ: ಶಾಮನೂರು ಶಿವಶಂಕರಪ್ಪ

shamanur shivashankarappa
09/11/2022

ಚಿತ್ರದುರ್ಗ: ಸ್ವಾಮೀಜಿಯೊಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಿಂದಾಗಿ ಹೆಣ್ಣುಮಕ್ಕಳು ಸ್ವಾಮಿಗಳ ಬಳಿ ಹೋಗಲಾರದಂತ ಸ್ಥಿತಿ ನಿರ್ಮಾಣವಾಗಿದೆ ಎಂದು ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.

ಸಾಣೇಹಳ್ಳಿಯಲ್ಲಿ ನಡೆದ ನಾಟಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು,  ಹೆಣ್ಣು ಮಕ್ಕಳು ಸ್ವಾಮೀಜಿ ಬಳಿ ಹೋಗದಂತಹ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿ ಬರಬಾರದು. ನಮ್ಮ ಹೆಣ್ಣು ಮಕ್ಕಳು ಕೂಡ ಎಚ್ಚರವಾಗಿ ಇರಬೇಕು ಎಂದಿದ್ದಾರೆ.

ಪ್ರಕರಣದ ಬಗ್ಗೆ ವೀರಶೈವ ಮಹಾಸಭಾ ಸೂಕ್ತ ತೀರ್ಮಾನ ಮಾಡುತ್ತದೆ. ಒಳಪಂಗಡ ಬೇಧ ಮರೆತು ವೀರಶೈವರು ಒಂದಾಗಬೇಕು. ಇವತ್ತಿನ ಸಮಾರಂಭದಲ್ಲಿ ಎಲ್ಲರೂ ಸರ್ಕಾರದ ಸಹಾಯ ಕೇಳುತ್ತಿದ್ದಾರೆ. ಸರ್ಕಾರದಿಂದ ಸಹಾಯ ಬೇಕೆಂದು ಕೇಳುವುದು ನಾಚಿಕೆಗೇಡು. ಸ್ವಾಭಿಮಾನದಿಂದ ನಾವು ಇರಬೇಕು ಎಂದು ಕರೆ ನೀಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ