ಸ್ವಾತಿ ಮಲಿವಾಲ್ ಗೆ ಅತ್ಯಾಚಾರ, ಕೊಲೆ ಬೆದರಿಕೆ: ಬ್ಲ್ಯಾಕ್‌ಮೇಲ್ ಮೆಸೇಜ್ ಗಳ ಸ್ಕೀನ್‌ಶಾಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ವಿಭವ್ ಕುಮಾರ್ ವಿರುದ್ಧ ಹಲ್ಲೆ ನಡೆಸಿದ ಆರೋಪದ ಮೇಲೆ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು ಅತ್ಯಾಚಾರ ಬೆದರಿಕೆ ಮತ್ತು ಕೊಲೆ ಬೆದರಿಕೆಗಳನ್ನು ಸ್ವೀಕರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಸ್ವಾತಿ ಅವರು ತಮಗೆ ಬಂದ ಬೆದರಿಕೆಗಳ ಕೆಲವು ಸ್ಕೀನ್‌ಶಾಟ್ ಗಲನ್ನು ತಮ್ಮ ಅಧಿಕೃತ ‘ಎಕ್ಸ್’ ಹ್ಯಾಂಡಲ್ ನಲ್ಲಿ ಹಂಚಿಕೊಂಡಿದ್ದಾರೆ.
ಮೈಕ್ರೋಬ್ಲಾಗಿಂಗ್ ಸೈಟ್ ‘ಎಕ್ಸ್’ ನಲ್ಲಿ ಸ್ವಾತಿ, “ನನ್ನ ಪಕ್ಷದ ನಾಯಕರು ಮತ್ತು ಸ್ವಯಂಸೇವಕರು ಅಂದರೆ ಎಎಪಿಯ ಕೆಲ ನಾಯಕರು ಮತ್ತು ಸ್ವಯಂಸೇವಕರು ನನ್ನ ವಿರುದ್ಧ ಚಾರಿತ್ರ್ಯ ಹತ್ಯೆ, ಬಲಿಪಶುವನ್ನು ಅವಮಾನಿಸುವುದು ಮತ್ತು ಭಾವನೆಗಳನ್ನು ಪ್ರಚೋದಿಸುವ ಅಭಿಯಾನವನ್ನು ಆಯೋಜಿಸಿದ ನಂತರ, ನನಗೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳು ಬರುತ್ತಿವೆ” ಎಂದು ಆರೋಪಿಸಿದ್ದಾರೆ.
ನಾನು ಈ ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳನ್ನು @DelhiPolice ವರದಿ ಮಾಡುತ್ತಿದ್ದೇನೆ. ಅವರು ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಯಾವುದೇ ಸಂದರ್ಭದಲ್ಲಿ, ನನಗೆ ಏನಾದರೂ ಸಂಭವಿಸಿದರೆ, ಅದನ್ನು ಪ್ರಚೋದಿಸಿದವರು ಯಾರು ಎಂದು ನಮಗೆ ತಿಳಿದಿದೆ” ಎಂದು ಮಲಿವಾಲ್ ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth