1:53 AM Saturday 18 - October 2025

ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ | ಅರ್ಹರು ಅರ್ಜಿ ಸಲ್ಲಿಸಿ

24/10/2020

ಹಾಸನ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ಆಧಾರ ಸ್ವಯಂ ಉದ್ಯೋಗ ಯೋಜನೆಯಡಿ ಜಿಲ್ಲೆಯ ವಿಕಲಚೇತನರು ಸ್ವಯಂ ಉದ್ಯೋಗ ಕೈಗೊಂಡು ಜೀವನ ನಡೆಸಲು ಬ್ಯಾಂಕ್ ಮೂಲಕ ಸಾಲ ಸೌಲಭ್ಯ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿಕಲಚೇತನರು ಈ ಕಚೇರಿಯಿಂದ ಅರ್ಜಿಯನ್ನು ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಹಾಸನ ಇಲ್ಲಿಗೆ ನವೆಂಬರ್ 18 ರೊಳಗೆ ದ್ವಿಪ್ರತಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

mahanayaka

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, 9ನೇ ಕ್ರಾಸ್, ಶಂಕರಮಠ ರಸ್ತೆ, ಕೆ.ಆರ್. ಪುರಂ, ಹಾಸನ ದೂರವಾಣಿ ಸಂಖ್ಯೆ: 08172-264546, 295546ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

ಮಹಾನಾಯಕ ಟೆಲಿಗ್ರಾಮ್ ಗ್ರೂಪ್ ಗೆ ಜಾಯಿನ್ ಆಗಿ

https://t.me/joinchat/Q8oMxBZkakVUy7-VpEsIXQ

ಇತ್ತೀಚಿನ ಸುದ್ದಿ

Exit mobile version