5:43 AM Wednesday 20 - August 2025

ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ

basavaraj bommai
28/07/2021

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

 

ಪ್ರಮಾಣವಚನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಧರ್ಮೇಂದ್ರ ಪ್ರಧಾನ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರುಗಳಾದ ಆರ್.ಅಶೋಕ್, ಗೋವಿಂದ ಕಾರಜೋಳ, ಶ್ರೀರಾಮುಲು, ಕಾಂಗ್ರೆಸ್ ನಾಯಕ ಆರ್.ವಿ.ದೇಶಪಾಂಡೆ ಪಾಲ್ಗೊಂಡಿದ್ದರು.

 

ಕರ್ನಾಟಕದ ಮಾಜಿ ಸಿಎಂ ಎಸ್.ಆರ್. ಬೊಮ್ಮಾಯಿ ಹಾಗೂ ಗಂಗಮ್ಮ ದಂಪತಿಯ ಹಿರಿಯ ಪುತ್ರನಾಗಿದ್ದಾರೆ. ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದಿರುವ ಬೊಮ್ಮಾಯಿ ಕೃಷಿ ಹಾಗೂ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದವರು. ಜೆಡಿಯುನಲ್ಲಿ ಇದ್ದ ಬೊಮ್ಮಾಯಿ ಬಳಿಕ 2008ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿ ಶಿಗ್ಗಾವಿ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕಾರಾಗಿ ಆಯ್ಕೆಯಾಗುವ ಮೂಲಕ ವಿಧಾನಸಭೆ ಪ್ರವೇಶಿಸಿದ್ದರು.

ಇತ್ತೀಚಿನ ಸುದ್ದಿ

Exit mobile version