ಮದ್ಯ ಪ್ರಿಯರಿಗೆ ಸಿಹಿ ಸುದ್ದಿ: ನಾಳೆ ಬಾರ್ ಬಂದ್ ಇಲ್ಲ
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಮದ್ಯ ಮಾರಾಟಗಾರರ ಸಂಘ ನೀಡಿದ್ದ ಬಾರ್ ಬಂದ್ ಕರೆಯನ್ನು ಸಿಎಂ ಸಿದ್ದರಾಮಯ್ಯನವರು ನೀಡಿದ ಭರವಸೆಯ ಬೆನ್ನಲ್ಲೇ ವಾಪಸ್ ಪಡೆಯಲಾಗಿದೆ.
ನವೆಂಬರ್ 20ರಂದು ರಾಜ್ಯಾದ್ಯಂತ ಬಾರ್ ಬಂದ್ ಗೆ ಕರೆ ನೀಡಲಾಗಿತ್ತು. ಬಂದ್ ಗೂ ಮುನ್ನ ದಿನ ಮದ್ಯ ಮಾರಾಟಗಾರರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ಮಾತುಕತೆ ನಡೆಸಿದರು. ಇದೇ ವೇಳೆ ಸಂಘದವರ ಬೇಡಿಕೆಗಳನ್ನ ಈಡೇರಿಸುವ ಭರವಸೆ ನೀಡಿದರು. ಸಿಎಂ ಭರವಸೆ ನೀಡಿದ ಬೆನ್ನಲ್ಲೇ ಬಾರ್ ಬಂದ್ ನಿರ್ಧಾರವನ್ನು ತಾತ್ಕಾಲಿಕವಾಗಿ ವಾಪಸ್ ಪಡೆದಿರುವುದಾಗಿ ಸಂಘ ಪ್ರಕಟನೆಯಲ್ಲಿ ತಿಳಿಸಿದೆ.
ಸಭೆಯ ಮುಖ್ಯಾಂಶ:
* ಮದ್ಯ ಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ತರುವಂತೆ enforcement ಮಾಡಲಾಗುವುದು.
* ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು.
* ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೊರಲಿನಿಂದ ಸ್ಪಷ್ಟಪಡಿಸಿದರು.
* ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಿಎಂ ತಿಳಿಸಿದರು.
* ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ.
* ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಸಿಎಂ ಎಚ್ಚರಿಕೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97