ಸಿಹಿ ಸುದ್ದಿ:  ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ! - Mahanayaka
5:57 PM Tuesday 16 - September 2025

ಸಿಹಿ ಸುದ್ದಿ:  ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ!

gas
01/06/2024

ನವದೆಹಲಿ: ಲೋಕಸಭೆ ಚುನಾವಣೆಯ ಕೊನೆಯ ಸುತ್ತಿನ ಮತದಾನದ ದಿನ ಗ್ಯಾಸ್ ಬೆಲೆ ಇಳಿಕೆಯಾಗಿದ್ದು, ಜೂನ್ 1 ರಂದು ಜಾರಿಗೆ ಬರುವಂತೆ ತೈಲ ಮಾರಾಟ ಸಂಸ್ಥೆಗಳು 19 ಕೆ.ಜಿ. ಎಲ್‌ ಪಿಜಿ ಸಿಲಿಂಡರ್‌ ನ ಬೆಲೆಯನ್ನು 72 ರೂ. ಕಡಿಮೆ ಮಾಡಿವೆ.


Provided by

ಹೊಸ ಬೆಲೆ 1,787 ರೂ. ಈ ಹೊಸ ಬೆಲೆ ಇಂದಿನಿಂದ ಜಾರಿಗೆ ಬರಲಿದೆ.  14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. 14.2 ಕೆಜಿ LPG ಸಿಲಿಂಡರ್ ಬೆಲೆ 829 ರೂ. ಆಗಿದೆ.

ಪ್ರತಿ ತಿಂಗಳ ಆರಂಭದಲ್ಲಿ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಕಚ್ಚಾ ತೈಲ ಬೆಲೆಗಳನ್ನು ತೈಲ ಮಾರುಕಟ್ಟೆ ಏಜೆನ್ಸಿಗಳು ಪರಿಶೀಲಿಸುತ್ತವೆ ಮತ್ತು ದೇಶೀಯ ಮಾರುಕಟ್ಟೆಯಲ್ಲಿ LPG ಬೆಲೆಗಳನ್ನು ಕಡಿಮೆಗೊಳಿಸಲಾಗುತ್ತದೆ ಅಥವಾ ಹೆಚ್ಚಿಸಲಾಗುತ್ತದೆ.

19 ಕೆಜಿ ವಾಣಿಜ್ಯ LPG ಸಿಲಿಂಡರ್‌ಗಳನ್ನು ಸಾಮಾನ್ಯವಾಗಿ ಹೋಟೆಲ್‌ ಗಳು, ರೆಸ್ಟೋರೆಂಟ್‌ ಗಳಲ್ಲಿ ಬಳಸಲಾಗುತ್ತದೆ. ಮನೆಯಲ್ಲಿ 14.2 ಕೆಜಿ ಎಲ್‌ಪಿಜಿ ಸಿಲಿಂಡರ್ ಅನ್ನು ಬಳಸಲಾಗುತ್ತದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ