ನೇತ್ರಾವತಿ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ಮುಳುಗಿ ಸಾವು!

ಬಂಟ್ವಾಳ: ಸಹೋದರ ಹಾಗೂ ಸ್ನೇಹಿತರ ಜೊತೆಗೆ ನೇತ್ರಾವತಿ ನದಿಗೆ ಈಜಲು ಹೋಗಿದ್ದ ಯುವಕನೋರ್ವ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಬಂಟ್ವಾಳ ನರಿಕೊಂಬು ಗ್ರಾಮದ ಪೊಯಿತಾಜೆ ಎಂಬಲ್ಲಿ ಭಾನುವಾರ ನಡೆದಿದೆ.
ನರಿಕೊಂಬು ಗ್ರಾಮದ ಬೀರಕೋಡಿ ನಿವಾಸಿ ಆನುಶ್ (20) ಮೃತಪಟ್ಟ ಯುವಕನಾಗಿದ್ದಾನೆ. ಭಾನುವಾರ ರಜೆಯ ದಿನವಾದ ಕಾರಣ ತನ್ನ ಸಹೋದರ ರೂಪೇಶ್ ಹಾಗೂ ಸ್ನೇಹಿತರಾದ ಕಿಸಾನ್, ಅನೀಶ್ ಜೊತೆಗೆ ಅನುಶ್ ನದಿಯಲ್ಲಿ ಈಜಲು ತೆರಳಿದ್ದರು.
ನದಿಯಲ್ಲಿ ಈಜುತ್ತಿದ್ದ ವೇಳೆ ಆನುಶ್ ಏಕಾಏಕಿ ಮುಳುಗಿದ್ದಾರೆ. ಅವರನ್ನು ರಕ್ಷಿಸಲು ಜೊತೆಗಿದ್ದವರು ಸಾಕಷ್ಟು ಪ್ರಯತ್ನ ಮಾಡಿದರಾದರೂ ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಮೃತದೇಹವನ್ನು ನದಿಯಿಂದ ಮೇಲಕೆತ್ತಿದ್ದಾರೆ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth