ತಬ್ಲೀಘ್ ಗಳಿಗೆ ನಿರ್ಬಂಧ: ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ - Mahanayaka
11:09 AM Saturday 23 - August 2025

ತಬ್ಲೀಘ್ ಗಳಿಗೆ ನಿರ್ಬಂಧ: ಹೈಕೋರ್ಟ್ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

20/11/2020


Provided by

ನವದೆಹಲಿ: ದೆಹಲಿಯ ನಿಜಾಮುದ್ದೀನ್ ಮರ್ಕಜ್‌ನಲ್ಲಿ ನಡೆದ ತಬ್ಲೀಗ್‌ ಜಮಾತ್‌ನ ಸಭೆಯಲ್ಲಿ ಪಾಲ್ಗೊಂಡಿದ್ದ ಒಂಬತ್ತು ಮಂದಿ ವಿದೇಶಿಯರಿಗೆ ಭಾರತ ಪ್ರವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಹಾಕಿದ್ದ ನಿರ್ಬಂಧ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.

ಕೋವಿಡ್‌ -19 ಹರಡುತ್ತಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ತಬ್ಲೀಗ್‌ ಜಮಾತ್‌ನ ಸಭೆಯಲ್ಲಿ ಪಾಲ್ಗೊಂಡಿದ್ದ ಒಂಬತ್ತು ಮಂದಿ ವಿದೇಶಿಯರಿಗೆ, 10 ವರ್ಷ ಭಾರತಕ್ಕೆ ಭೇಟಿ ನೀಡದಂತೆ ನಿರ್ಬಂಧ ಹೇರಿ ಕರ್ನಾಟಕ ಹೈಕೋರ್ಟ್ ಆದೇಶ ನೀಡಿತ್ತು.

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್  ಮೇಲ್ಮನವಿ ಸಲ್ಲಿಸಿದ ವ್ಯಕ್ತಿ ಹಾಗೂ ಇತರ ಎಂಟು ಮಂದಿ ಭವಿಷ್ಯದಲ್ಲಿ ಭಾರತಕ್ಕೆ ಭೇಟಿ ನೀಡುವ ಸಲುವಾಗಿ ವೀಸಾಕ್ಕೆ ಅರ್ಜಿ ಸಲ್ಲಿಸಿದರೆ, ಹೈಕೋರ್ಟ್‌ನ ಆದೇಶದ ಪ್ರಭಾವಕ್ಕೆ ಒಳಗಾಗದೆ ಅರ್ಹತೆಯ ಆಧಾರದಲ್ಲಿ ಅವರ ಅರ್ಜಿಗಳನ್ನು ಪರಿಗಣಿಸಲಾಗುವುದು ಎಂದು ಹೇಳಿದೆ.

ನ್ಯಾಯಮೂರ್ತಿಗಳಾದ ಎಸ್‌. ಅಬ್ದುಲ್‌ ನಜೀರ್‌ ಮತ್ತು ಸಂಜೀವ್‌ ಖನ್ನಾ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶವನ್ನು ಹೊರಡಿಸಿದೆ. ಕೊರೊನಾ ಆರಂಭದ ಘಟ್ಟದಲ್ಲಿ ತಬ್ಲೀಘ್ ಗಳಿಂದ ಕೊರೊನಾ ಹರಡಿದೆ. ಅವರು ಕೊರೊನಾ ಹರಡಿ ಭಯೋತ್ಪಾದನೆ ಮಾಡುತ್ತಿದ್ದಾರೆ ಎಂದು ಬಲಪಂಥೀಯ ಸಂಘಟನೆಗಳು ಜನರನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟಿದ್ದರು. ಈ ಸಂಬಂಧ ಹೈಕೋರ್ಟ್ ಕೂಡ ತಬ್ಲೀಘ್ ಗಳಿಗೆ 10 ವರ್ಷ ಕರ್ನಾಟಕ ಪ್ರವೇಶವನ್ನು ನಿರ್ಬಂಧಿಸಿತ್ತು.

ಇತ್ತೀಚಿನ ಸುದ್ದಿ