ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆರೋಪವು ಮಂಗಳೂರಿನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಹಾಗೂ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಅಪರಾಧಿಗೆ ಪೋಕ್ಸೋ ಕಾಯ್ದೆಯ ಕಲಂ 6ರನ್ವಯ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸಲಾಗಿದೆ. ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಬೊಳ್...