ಬೆಂಗಳೂರು: ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ದರದಲ್ಲಿ 50 ರೂ. ಏರಿಕೆಯಾಗಿದೆ. ಅದರಂತೆ 14.2 ಕೆಜಿಯ ಎಲ್ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 949.50 ರೂಪಾಯಿಯಾಗಿದ್ದು, ಇಂದಿನಿಂದಲೇ ಅನ್ವಯವಾಗುವಂತೆ ದರ ಹೆಚ್ಚಳ ಮಾಡಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರಷ್ಯಾ ಉಕ್ರೇನ್ ಯುದ್ಧ ಈಗ ಜನರ ಮೇಲೆ ನೇರ ಪರಿಣಾಮ ಬೀರಿದೆ. ಕಚ್ಚಾತ...