ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮೇಲೆ ಇರುವ ಸಿಡಿ ಪ್ರಕರಣ ಕ್ಲಿಯರ್ ಆಗುತ್ತಿದೆ. ಇದರಿಂದಾಗಿ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ನಿರೀಕ್ಷೆಯಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ವಿರುದ್ಧ ಸಣ್ಣಪುಟ್ಟ ಬೇರೆ ಬೇರೆ ಯಾವುದೋ...