ಮಂಗಳೂರು: ಮೂಲ್ಕಿ ಬಸ್ ನಿಲ್ದಾಣದಲ್ಲಿ ಭಾನುವಾರ ಬೆಳಗ್ಗೆ ವ್ಯಕ್ತಿಯೋರ್ವನ ಶವ ಮುಖ ಸಂಪೂರ್ಣ ನಜ್ಜುಗುಜ್ಜಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವರದಿಯಗಿದೆ. ಕಾರ್ಕಳದ ಮುಂಡ್ಕೂರಿನ ಕಟ್ಟಡ ನಿರ್ಮಾಣ ಕಾರ್ಮಿಕ ಹರೀಶ್ ಸಾಲ್ಯಾನ್ (37) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆ ವೇಳೆ ಮುಖಕ್ಕೆ ಕಲ್ಲಿನಿಂದ ಜಜ್ಜಿರು...