ಇದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ಕಥೆ. ಬಹುಶಃ ಇದನ್ನು ಯಾರು ಬರೆದಿದ್ದಾರೋ ಗೊತ್ತಿಲ್ಲ. ಆದರೆ ಈ ಕಥೆಯಲ್ಲಿರುವ ಮೌಲ್ಯ ಅಂತೂ ಇಂದಿನ ಮಾನವ ಜಗತ್ತಿಗೆ ಅತ್ಯಗತ್ಯವಾಗಿದೆ. ಆ ಕಥೆ ಹೀಗಿದೆ: ಮನೆಗೆ ಹೊರಟಿದ್ದೆ ಎಲೆಕ್ರ್ಟಿಕ್ ಕಂಬಕ್ಕೆ ಯಾರೋ ಒಂದು ಬೋರ್ಡ್ ನೇತು ಹಾಕಿದ್ದರು. ಅದರಲ್ಲಿ ಏನು ಬರೆದಿರಬಹುದು ಎಂದು ಕು...