ಮಂಗಳೂರು: ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ ಐ ಸಂಘಟನೆಯ ಮುಖಂಡರ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದು, ಎಸ್ ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕರ್ ಕುಳಾಯಿ ಮನೆ ಮೇಲೆ ದಾಳಿ ನಡೆಸಲಾಗಿದೆ. ಅಬೂಬಕರ್ ಕುಳಾಯಿಯವರನ್ನು ಬಂಧಿಸಲು ಪೊಲೀಸರು ದಾಳಿ ಮಾಡಿದ್ದು, ದಾಳಿಯ ವೇಳೆ ಅಬೂಬಕರ್ ಕುಳಾಯಿ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ. ...