ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶ ಬಂದ ಬಳಿಕ ಭಾರೀ ಹಿಂಸಾಚಾರ ನಡೆದಿದ್ದು, ಹಿಂಸಾಚಾರದಲ್ಲಿ 6 ಮಂದಿ ಸಾವನ್ನಪ್ಪಿ ಹಲವಾರು ಕಾರ್ಯಕರ್ತರು ಗಾಯಗೊಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ವರದಿ ನೀಡುವಂತೆ ಕೇಂದ್ರ ಗೃಹ ಇಲಾಖೆ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ. ಚುನಾವಣಾ ಫಲಿತಾಂಶ ಬಂದ 24 ಗಂಟೆಗಳಲ್ಲಿ, ಅನೇಕ ಬಿಜೆಪಿ ಕಾರ್...