ಮಾನವನ ಉಗಮ ಮತ್ತು ಅಭ್ಯುದಯದ ಇತಿಹಾಸವನ್ನು ಅರಿತಿರುವ ಯಾರಿಗೇ ಆದರೂ ಒಂದು ಅಂಶ ತಿಳಿದಿರಲೇಬೇಕು. ಅದೇನೆಂದರೆ, ಮಾನವನಲ್ಲಿ ಸ್ವಾಭಾವಿಕವಾದ ಆಂದೋಲನದ ತುಡಿತ ಮತ್ತು ಸಂವೇದನೆ ಇಲ್ಲದೆ ಹೋಗಿದ್ದಲ್ಲಿ ಬಹುಶಃ ಮನುಕುಲ ಶಿಲಾಯುಗದಿಂದ ಒಂದು ಹೆಜ್ಜೆಯೂ ಮುಂದೆ ಚಲಿಸಲಾಗುತ್ತಿರಲಿಲ್ಲ. ತನಗೆ ಹಸಿವಾಗುವುದನ್ನು ಹೇಳಲಾರದೆ ರಚ್ಚೆ ಹಿಡಿಯುವ ಎಳೆ ಕೂ...