ಮಂಗಳೂರು: ಮಹಿಳಾ ಅಧಿಕಾರಿಯೊಬ್ಬರನ್ನು ಬಿಜೆಪಿ ಮುಖಂಡರೋರ್ವರು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ಮಹಿಳಾ ಅಧಿಕಾರಿ ಬಿಜೆಪಿ ಮುಖಂಡನ ವಿರುದ್ಧ ದೂರು ನೀಡಿದ್ದಾರೆ. ಮಂಗಳೂರು ನಗರದ ಹೊರ ವಲಯದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಸ್ಥಳೀಯ ಬಿಜೆಪಿ ಮುಖಂಡ, ನ್ಯಾಯವಾದಿ ಅಸ್ಗರ್ ಮುಡಿಪು, ಕರ್ನ...