ವಿಶಾಖಪಟ್ಟಣಂ: ಜಾತಿಯ ಕಾರಣಕ್ಕಾಗಿ ಮದುವೆಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದು, ಇದರಿಂದ ನೊಂದ ಪ್ರೇಮಿಗಳು ತಮ್ಮ ಮದುವೆಯ ದಿನದಂದೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣಂನ ಗಜುವಾಕಾ ಪೊಲೀಸ್ ಠಾಣಾ ವ್ಯಾಪ್ತಿಯ ಸುಂದರಯ್ಯ ಕಾಲನಿಯಲ್ಲಿ ನಡೆದಿದೆ. ಶುಕ್ರವಾರ ಈ ಘಟನೆ ನಡೆದಿದೆ. ಬಿ.ಅವಿನಾಶ್(33) ಅವರು ವಿಧವ...